ಇಬ್ಬರು ಮಕ್ಕಳನ್ನು ಕೊಂದು ಪತ್ನಿಯೊಂದಿಗೆ ಟೆಕ್ಕಿ ಆತ್ಮಹತ್ಯೆ

Public TV
1 Min Read
KADUGODI SUICIDE

ಬೆಂಗಳೂರು: ಸಿಲಿಕಾನ್ ಸಿಟಿಯ ಕಾಡುಗೋಡಿ (Kadugodi) ಬಳಿ ಒಂದೇ ಕುಟಂಬದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಮಕ್ಕಳಾದ ಮೋಕ್ಷಾ (ಎರಡೂವರೆ ವರ್ಷ), ಸೃಷ್ಟಿ (8 ತಿಂಗಳು) ಇಬ್ಬರು ಎಂದು ಗುರುತಿಸಲಾಗಿದೆ. ದಂಪತಿ ಆಂಧ್ರ ಮೂಲದವರಾಗಿದ್ದಾರೆ. ಮೃತ ವೀರಾರ್ಜುನ್ ಐಟಿಪಿಎಲ್‍ನಲ್ಲಿರೋ ಯೂರೋ ಪಿಲ್ಸ್ ಅನ್ನೋ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಬುಧವಾರ ರಾತ್ರಿ ಇಬ್ಬರು ಮಕ್ಕಳನ್ನ ಕೊಂದು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ಆತ್ಮಹತ್ಯೆಯ ಮಾಹಿತಿ ರವಾನೆಯಾಗಿದೆ. ಕೂಡಲೇ ಕಾಡುಗೋಡಿ ಪೊಲೀಸರು, ಎಫ್‍ಎಸ್‍ಎಲ್ ಟೀಂ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಗುವನ್ನು ನೋಡಲೆಂದು ಪತ್ನಿ ಮನೆಗೆ ಹೋದಾಗ ಹಲ್ಲೆಗೈದು ಹಲ್ಲು ಕಿತ್ತ ಮಾವ!

ಮೂರು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಯಾಕೆಂದರೆ ಹೇಮಾವತಿ ಸೋದರ ಮೂರು ದಿನಗಳಿಂದ ಫೋನ್ ಮಾಡುತ್ತಿದ್ದರು. ಆದರೆ ಯಾರೂ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಅವರು ಆಂಧ್ರದಿಂದ ಬೆಂಗಳೂರಿಗೆ ಬಂದಿದ್ದಾರೆ. ಅಂತೆಯೇ ಕಾಡುಗೋಡಿಯಲ್ಲಿ ಸಹೋದರಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮನೆಯ ಕಿಟಕಿಯಿಂದ ನೋಡಿದಾಗ ಎಲ್ಲರು ಶವವಾಗಿ ಬಿದ್ದಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಟೀಂ, ವಾಗಿಲು ಒಡೆದು ಮನೆಯೊಳಗೆ ಪ್ರವೇಶ ಮಾಡಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ಗಿರೀಶ್ ಕೂಡ ಭೇಟಿ ನೀಡಿದ್ದಾರೆ.

Web Stories

Share This Article