ಬೆಂಗಳೂರು ಹಾರರ್ – ಬಾಲಕಿಯ ಮೇಲೆ ರೂಮಿನಲ್ಲೇ ಪ್ರಾಂಶುಪಾಲನಿಂದ ಅತ್ಯಾಚಾರ

Public TV
1 Min Read
Stop Rape Crime 2

ಬೆಂಗಳೂರು: ನಗರದ ಖಾಸಗಿ ಶಾಲೆಯ (School) ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.

ವರ್ತೂರು (Varthur) ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ ಮನೆಗೆ ವಾಪಸ್ ಆಗಿದ್ದಳು. ಮನೆಗೆ ಮರಳಿದ ವೇಳೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ವಿಪರೀತ ನೋವಿನಿಂದ ಬಳಲಿದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಡಿಸಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಇದನ್ನೂ ಓದಿ: ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು: ಹೆಚ್‌ಡಿಕೆಗೆ ಡಿಕೆಶಿ ಟಾಂಗ್‌

ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನೇ ಆಕೆಯನ್ನು ಖಾಲಿ ರೂಮಿಗೆ ಕರೆದೊಯ್ದು ಕೃತ್ಯ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಸಂಬಂಧ ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು (Police) ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಮಾಯಕ ವ್ಯಾಪಾರಿ ಮೇಲೆ ಕಳ್ಳತನ ಆರೋಪ ಹೊರಿಸಿ ಲಾಠಿಯಿಂದ ಹಲ್ಲೆ – ಹೆಡ್‌ಕಾನ್‌ಸ್ಟೇಬಲ್ ಅಮಾನತು

Web Stories

Share This Article