ಚೀತಾ ಯೋಜನೆ ಮರುಪರಿಚಯಿಸುವ ಕಾರ್ಯಕ್ರಮದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ: ಸುಪ್ರೀಂ

Public TV
2 Min Read
Cheetah 1

ನವದೆಹಲಿ: ಭಾರತದಲ್ಲಿ ಚೀತಾ ಯೋಜನೆ (Project Cheetah) ಮರುಪರಿಚಯಿಸುವ ಕಾರ್ಯಕ್ರಮಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಹೇಳಿದೆ. ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) 9 ಚೀತಾಗಳ ಸಾವಿನ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬಳಿಕ ಕೋರ್ಟ್ ಹೀಗೆ ಹೇಳಿದೆ.

ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿದ 9 ಚೀತಾಗಳಲ್ಲಿ ಮೂರು ಮರಿಗಳು ಸೇರಿವೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತರಲಾದ 20 ಚೀತಾಗಳನ್ನು ರಾಷ್ಟ್ರೀಯ ಉದ್ಯಾನದಲ್ಲಿ ಬಿಡಲಾಗಿತ್ತು. ಅಂದಿನಿಂದ ಅಲ್ಲಿ ನಾಲ್ಕು ಮರಿಗಳು ಜನಿಸಿದ್ದವು. ಇದನ್ನೂ ಓದಿ: ಕಳವಳ ಉಂಟುಮಾಡಿದ ರೇಡಿಯೋ ಕಾಲರ್ – ಮತ್ತೊಂದು ಚೀತಾ ಕತ್ತಿನಲ್ಲಿ ತೀವ್ರ ಗಾಯಗಳು ಪತ್ತೆ

Supreme Court 1

ಕಳೆದ ತಿಂಗಳು ನಾಲ್ಕು ದಿನಗಳ ಅಂತರದಲ್ಲಿ ಎರಡು ಗಂಡು ಚೀತಾಗಳು ಸಾವನ್ನಪ್ಪಿದ್ದು, ತೇಜಸ್ ಹೆಸರಿನ ಚೀತಾ ಜುಲೈ 11 ರಂದು ಸಾವನ್ನಪ್ಪಿತ್ತು. ಜುಲೈ 14 ರಂದು ಸೂರಜ್ ಹೆಸರಿನ ಚೀತಾದ ಶವ ಪತ್ತೆಯಾಗಿತ್ತು. ಇದಕ್ಕೂ ಮೊದಲು ಮಾರ್ಚ್ 27 ರಂದು ಸಶಾ ಎಂಬ ಹೆಣ್ಣು ಚೀತಾ ಮೂತ್ರಪಿಂಡದ ಕಾಯಿಲೆಯಿಂದ ಮೃತಪಟ್ಟಿತ್ತು. ಉದಯ್ ಹೆಸರಿನ ಚೀತಾ ಏಪ್ರಿಲ್ 23 ರಂದು ಹೃದಯ-ಶ್ವಾಸಕೋಶದ ವೈಫಲ್ಯದಿಂದ ಸಾವನ್ನಪ್ಪಿತ್ತು. ದಕ್ಷಾ ಹೆಸರಿನ ಹೆಣ್ಣು ಚೀತಾ ಮೇ 9 ರಂದು ಸಾವಿಗೀಡಾಗಿತ್ತು. ಹವಾಮಾನ ವೈಪರೀತ್ಯ ಮತ್ತು ನಿರ್ಜಲೀಕರಣದಿಂದ ಮೇ 25 ರಂದು ಎರಡು ಚಿರತೆ ಮರಿಗಳು ಹಾಗೂ ಮೇ 23 ರಂದು ಮತ್ತೊಂದು ಮರಿ ಸಾವನ್ನಪ್ಪಿದ್ದವು. ಇದನ್ನೂ ಓದಿ:  ಕುನೋ ನ್ಯಾಷನಲ್ ಪಾರ್ಕ್‌ನಲ್ಲಿ ಇನ್ನೆರಡು ಚೀತಾ ಮರಿಗಳ ಸಾವು – ಕಳೆದ ಎರಡು ತಿಂಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳ

Dhatri cheetah

ಮಚ್ಚೆ ಗುರುತಿನ ಚೀತಾಗಳ ಸಂತತಿ ಈಗಾಗಲೇ ಭಾರತದಲ್ಲಿ ನಾಶವಾಗಿದೆ. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 1952ರಲ್ಲಿ ಈ ಪ್ರಭೇದ ಭಾರತದಲ್ಲಿ ಇಲ್ಲ ಎಂದು ಘೋಷಣೆ ಮಾಡಲಾಗಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು. ಆದ್ರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 2 ರಿಂದ 6 ವರ್ಷ ವಯಸ್ಸಿನ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ತಮ್ಮ ಜನ್ಮದಿನವಾದ ಸೆ.17 ರಂದು ಪ್ರಧಾನಿ ಮೋದಿ ಈ ಚಿರತೆಗಳು ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡುಗಡೆ ಮಾಡಲಾಗಿತ್ತು. ನಂತರ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರಿಸಲಾಗಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಕುನೋ ಉದ್ಯಾನಕ್ಕೆ ಬಿಡಲಾದ ಒಂದು ವರ್ಷ ಅವಧಿ ಪೂರೈಸುವುದರ ಒಳಗೆ ಮೂರು ಮರಿಗಳು ಸೇರಿದಂತೆ 9 ಚೀತಾಗಳು ಸಾವನ್ನಪ್ಪಿವೆ. ಇಲ್ಲಿನ ಹವಾಮಾನ ಪರಿಸ್ಥಿತಿ ಮತ್ತು ಅದರಿಂದಾಗುವ ಪರಿಣಾಮಗಳನ್ನು ತಿಳಿಯಲು ನಿರಂತರವಾಗಿ ಕೆಲಸ ನಡೆಯುತ್ತಿದೆ. ಅಲ್ಲದೇ ಪ್ರತಿ ವರ್ಷ 12 ರಿಂದ 14 ಹೊಸ ಚೀತಾಗಳನ್ನು ತರಿಸಲಾಗುತ್ತದೆ. ಕುನೋದಲ್ಲಿ ಸಮಸ್ಯೆಗಳಿವೆ ಆದ್ರೆ ಆತಂಕಕಾರಿ ಏನೂ ಅಲ್ಲ ಎಂದು ಸರ್ಕಾರ ಕೋರ್ಟ್‌ಗೆ ತಿಳಿಸಿದೆ.

Web Stories

Share This Article