ಸ್ಪಂದನಾ ಸಾವಿನ ಬಗ್ಗೆ ಅಪಪ್ರಚಾರ ಮಾಡಬೇಡಿ- ಮೇಘನಾ ರಾಜ್

Public TV
1 Min Read
meghana raj

ರಾಘು- ಸ್ಪಂದನಾ ಅನೋನ್ಯವಾಗಿ ಬದುಕುತ್ತಿದ್ದರು. ಸ್ಪಂದನಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ನಟಿ ಮೇಘನಾ ರಾಜ್ (Meghanaraj) ಮನವಿ ಮಾಡಿದ್ದಾರೆ.

spandana vijay raghavendra 5

ಸ್ಪಂದನಾ(Spandana) ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಕ್ಕೆ ನಟಿ ಮೇಘನಾ ಮಾತನಾಡಿದ್ದಾರೆ. ರಾಘು-ಸ್ಪಂದನಾ ನಮಗೆ ಬಹಳ ಆತ್ಮೀಯರಾಗಿದ್ದರು. ಏನು ನಡೆದಿದೆ, ಏನು ಆಗಿದೆ ಅನ್ನೋದು ಅವರ ಕುಟುಂಬಕ್ಕೆ ತಿಳಿದಿರುತ್ತದೆ. ಸ್ಪಂದನಾ ಬಗ್ಗೆ ಅಪಪ್ರಚಾರ ಮಾಡಬೇಡಿ. ಆಕೆಗೆ ಮರ್ಯಾದೆ ಕೊಡಿ. ಸೋಷಿಯಲ್ ಮೀಡಿಯಾದಲ್ಲಿ ಇಲ್ಲದೇ ಇರುವ ಸುದ್ದಿಗಳನ್ನ ಹರಡಬೇಡಿ. ಅವರ ಕುಟುಂಬಕ್ಕೆ ಸ್ಪೆಸ್ ಕೊಡಿ.

meghana raj 1

ರಾಘು- ಸ್ಪಂದನಾ ನನ್ನ ಫಾಮಿಲಿ ಇದ್ದಂತೆ. ನಾವು ಇರೋ ಪರಿಸ್ಥಿತಿಯಲ್ಲಿ ಇನ್ನೊಂದು ಕುಟುಂಬನ ಹಾಗೇ ನೋಡೋಕೆ ಆಗಲ್ಲ. ನಮ್ಮ ಕುಟುಂಬನೇ ಅವರು. ನನ್ನ ಕುಟುಂಬಕ್ಕೆ ಆಗಿರೋ ನೋವಿದು ಎಂದು ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:ದೇವರಿಗೆ ಕನ್ನಡದವರ ಮೇಲೆ ಕೋಪ ಬಂದಿದ್ಯಾ- ವಿನೋದ್ ರಾಜ್ ಭಾವುಕ

ಸದ್ಯ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹಾಗೂ ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದು, ವಿಜಯ ರಾಘವೇಂದ್ರ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಹರಿಶ್ಚಂದ್ರಘಾಟ್‌ನಲ್ಲಿ ಮಧ್ಯಾಹ್ನ 2 ಗಂಟೆಗೆ ಬರ್ನಿಂಗ್‌ಗೆ ಸ್ಲಾಟ್ ಬುಕ್ಕಿಂಗ್ ಮಾಡಲಾಗಿದೆ. ಈಡಿಗ ಸಮುದಾಯದ ಸಂಪ್ರದಾಯದಂತೆ ಪೂಜೆ ಪುನಸ್ಕಾರ ನಡೆಸಿ ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಅಂತ್ಯಕ್ರಿಯೆಗೆ ಪೂಜೆ ಪುನಸ್ಕಾರ ಹಿನ್ನೆಲೆ ಬಿಬಿಎಂಪಿಯಿಂದ ಕೂಡ ಸ್ವಚ್ಛತಾ ಕಾರ್ಯ ಮಾಡಲಾಗಿದೆ.

Share This Article