ಹೃದಯಾಘಾತದಿಂದ ನಿಧನ ಹೊಂದಿರುವ ನಟ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಸ್ಪಂದನಾ (Spandana) ಅವರ ಪಾರ್ಥಿವ ಶರೀರವನ್ನು ಹರಿಶ್ಚಂದ್ರ ಘಾಟ್‍ನತ್ತ ತೆಗೆದುಕೊಂಡು ಹೋಗಲಾಗುತ್ತಿದೆ.
ಇಂದು ಮುಂಜಾನೆ 5.30ಯಿಂದ ಮಧ್ಯಾಹ್ನ 2.30ವರೆಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಅಂತೆಯೇ ಸಿನಿಮಾ ರಂಗದವರು, ರಾಜಕೀಯ ಗಣ್ಯರು ಸೇರಿದಂತೆ ಹಲವಾರು ಮಂದಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದರು. ಇಂದು ಸಂಜೆ 4 ಗಂಟೆಗೆ ಹರಿಶ್ಚಂದ್ರ ಘಾಟ್‍ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಯಾತ್ರೆ ಮಲ್ಲೇಶ್ವರಂನಲ್ಲಿರುವ ಅವರ ಮನೆಯಿಂದ ಹರಿಶ್ಚಂದ್ರ ಘಾಟ್‍ನತ್ತ ಹೊರಟಿದೆ.
ದಾರಿಯುದ್ಧಕ್ಕೂ ಜನಸಾಗರವೇ ನಿಂತಿದ್ದು, ಪುಷ್ಪವೃಷ್ಠಿ ಸುರಿಯುತ್ತದೆ. ಕುಟುಂಬಸ್ಥರು ಕೂಡ ಕಣ್ಣೀರ ವಿದಾಯ ಹೇಳುತ್ತಿದ್ದಾರೆ. ಅಂಬುಲೆನ್ಸ್ ಮೂಲಕ ಸ್ಪಂದನಾ ಪಾರ್ಥಿವ ಶರೀರದ ಮೆರವಣಿಗೆ ಹೊರಟಿದೆ. ಈಡಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂಬುದಾಗಿ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹರಿಶ್ಚಂದ್ರ ಘಾಟ್‌ನಲ್ಲಿ ಸಂಜೆ 4 ಗಂಟೆಗೆ ಸ್ಪಂದನಾ ಅಂತ್ಯಸಂಸ್ಕಾರ
ಭಾನುವಾರ ಬ್ಯಾಂಕಾಕ್‍ನಲ್ಲಿ ನಿಧನರಾಗಿರುವ ಸ್ಪಂದನಾ ಮೃತದೇಹವನ್ನು ಎರಡು ದಿನಗಳ ಬಳಿಕ ಬೆಂಗಳೂರಿಗೆ ವಿಮಾನದ ಮೂಲಕ ತರಲಾಯಿತು. ಅಲ್ಲಿಂದ ನೇರವಾಗಿ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ಬಿ.ಕೆ ಶಿವರಾಂ ಮನೆಗೆ ತಂದು ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿಕೊಡಲಾಗಿತ್ತು.
Web Stories