ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

Public TV
1 Min Read
governor freedom fighters

ಬೆಂಗಳೂರು: ಕ್ವಿಟ್ ಇಂಡಿಯಾ ಚಳವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅವರು ಬುಧವಾರ ಬೆಂಗಳೂರಿನಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಿಹಿ ನೀಡುವ ಮೂಲಕ ಗೌರವ ಸಲ್ಲಿಸಿದರು.

governor freedom fighters4

ಬುಧವಾರ ಬೆಳಗ್ಗೆ ಮೊದಲಿಗೆ ಬಸವನಗುಡಿಯಲ್ಲಿರುವ ಶ್ರೀಸಾಯಿ ವೃದ್ದಾಶ್ರಮದಲ್ಲಿ ವಾಸಿಸುತ್ತಿರುವ ಶಕುಂತಲ ಅವರನ್ನು ರಾಜ್ಯಪಾಲರು ಭೇಟಿ ಮಾಡಿ ಸನ್ಮಾನಿಸಿ ಪ್ರಮಾಣ ಪತ್ರ, ಸಿಹಿ ನೀಡಿ ನಮನ ಸಲ್ಲಿಸಿದರು. ಇದನ್ನೂ ಓದಿ: ಮತ ಬ್ಯಾಂಕಿಗೆ ಸಿದ್ದರಾಮಯ್ಯ ಸರ್ಕಾರ ಬೊಕ್ಕಸವನ್ನು ಲೂಟಿ ಮಾಡಿ ರೈತರ ನಾಶಕ್ಕೆ ಮುಂದಾಗುತ್ತಿದೆ: ಸಿ.ಟಿ.ರವಿ

governor freedom fighters6

governor freedom fighters2

ನಂತರ ಯಲಚೇನಹಳ್ಳಿಯ ನಂಜಪ್ಪ ಲೇಔಟ್‌ನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಎಸ್.ವಿ.ಟಿ ಗುಪ್ತಾ ಅವರ ಮನೆಗೆ ತೆರಳಿ ಸನ್ಮಾನಿಸಿ, ಪ್ರಮಾಣ ಪತ್ರ ನೀಡಿದರು.

governor freedom fighters5

ತದನಂತರ ಬನಶಂಕರಿ 3ನೇ ಹಂತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶಂಕರನಾರಾಯಣ ರಾವ್ ಅವರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು. ಅವರ ಕುಶಲೋಪರಿ ವಿಚಾರಿಸಿದ ರಾಜ್ಯಪಾಲರು, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ತಮಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು. ಇದನ್ನೂ ಓದಿ: ಬಿಡದಿಯಲ್ಲಿ ಶೀಘ್ರವೇ ತಾಜ್ಯ ಇಂಧನ ಘಟಕ ಆರಂಭ: ಕೆ.ಜೆ ಜಾರ್ಜ್

governor freedom fighters8

governor freedom fighters7

ಮಲ್ಲೇಶ್ವರಂನಲ್ಲಿರುವ ನಾಗಭೂಷಣ್ ರಾವ್ ಅವರ ಮನೆಗೆ ತೆರಳಿದ ರಾಜ್ಯಪಾಲರು, ನಾಗಭೂಷಣ್ ರಾವ್ ಅವರನ್ನು ಸನ್ಮಾನಿಸಿ ಕುಶಲೋಪರಿ ವಿಚಾರಿಸಿದರು. ತಮ್ಮ ದೇಶ ಸೇವೆ ನಮ್ಮೆಲ್ಲರಿಗೆ ಸ್ಫೂರ್ತಿ. ನಿಮಗೆ ಹಾಗೂ ನಿಮ್ಮ ಕುಟುಂಬಗಳಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ರಾಜ್ಯಪಾಲರು ಹೇಳಿ ತಲೆಬಾಗಿ ನಮಿಸಿದರು.

ಭೂಪಸಂದ್ರದ ವಿನಾಯಕ ಲೇಔಟ್‌ನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಸಿ. ನಾರಾಯಣಪ್ಪ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು. ಈ ವೇಳೆ ಜಿಲ್ಲಾಧಿಕಾರಿ ದಯಾನಂದ್ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

Web Stories

Share This Article