Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ: ಸಿದ್ದರಾಮಯ್ಯ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ: ಸಿದ್ದರಾಮಯ್ಯ

Public TV
Last updated: August 12, 2023 5:31 pm
Public TV
Share
3 Min Read
Siddaramaiah 4
SHARE

-ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ

ಬೆಂಗಳೂರು: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು (Constitution) ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಸಂವಿಧಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ: ಮೋದಿ ವಾಗ್ದಾಳಿ

ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ
ಕೆಳ ನ್ಯಾಯಾಲಯಗಳಲ್ಲಿ ಮೀಸಲಾತಿ ಇದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇಲ್ಲ. ಅಲ್ಲಿ ಮೀಸಲಾತಿ ಜಾರಿಯಾದರೆ ಹೆಚ್ಚು ಉಪಯುಕ್ತವಾದ ನ್ಯಾಯದಾನ ನೀಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಂವಿಧಾನ ಬರುವ ಮುನ್ನ ಒಂದು ರೀತಿಯ ನ್ಯಾಯದಾನ ವ್ಯವಸ್ಥೆ ಇತ್ತು. ಸಂವಿಧಾನ ಬಂದ ನಂತರ ಅದು ಭಿನ್ನವಾಗಿದೆ. ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರ್ಯ ದೊರೆತ ನಂತರ ಅದು ಭಿನ್ನವಾಗಿದೆ. ಅದಕ್ಕೂ ಮುನ್ನ ರಾಜಮಹಾರಾಜರು ನ್ಯಾಯ ತೀರ್ಮಾನ ಮಾಡುತ್ತಿದ್ದರು. ಅವರ ತೀರ್ಮಾನ ಮನುವಾದದ ರೀತಿಯ ಮೇಲೆ ತೀರ್ಮಾನವಾಗುತ್ತಿದ್ದವು. ಜಾತಿ ವ್ಯವಸ್ಥೆ ಬಲವಾಗಿದ್ದುದರಿಂದ ಒಂದೇ ರೀತಿಯ ತಪ್ಪಿಗೆ ಬೇರೆ ಬೇರೆ ಶಿಕ್ಷೆಗಳಿದ್ದವು. ಶ್ರೀಮಂತರಿಗೆ, ಮೇಲ್ಜಾತಿಯವರಿಗೆ, ಕೆಲವರ್ಗದವರಿಗೆ, ಬಡವರಿಗೆ ಬೇರೆ ರೀತಿಯ ಶಿಕ್ಷೆ ಆಗುತ್ತಿತ್ತು. ಸಂವಿಧಾನ ಬಂದ ನಂತರ ಆರ್ಟಿಕಲ್ 14 ರಲ್ಲಿ Equality before Law, Equal Protection of Law ಎಂದು ಒಪ್ಪಿಕೊಂಡಿದ್ದೇವೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದಿದ್ದಾರೆ.

ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕೆಂದು ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಸುಪ್ರಸಿದ್ಧ ವಕೀಲರನ್ನು ಕರ್ನಾಟಕ ಬಾರ್ ಕೌನ್ಸಿಲ್ ಕಳುಹಿಸಿಕೊಟ್ಟಿರುವುದು ಹೆಮ್ಮೆಯ ವಿಚಾರ. ಬಹಳ ಜನ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿದ್ದಾರೆ ಮತ್ತು ತಜ್ಞರಾಗಿದ್ದಾರೆ. ಕರ್ನಾಟಕದಲ್ಲಿ ಬಹಳ ಜನ ಪ್ರತಿಭಾವಂತ ವಕೀಲರಿದ್ದಾರೆ. ಯಾರು ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ. ಅವಕಾಶದಿಂದ ವಂಚಿತರಾದವರು ದಡ್ಡರು ಹಾಗೂ ಅವಕಾಶ ದೊರೆತವರು ಬುದ್ಧಿವಂತರು. ಸಂವಿಧಾನದಿಂದ ಎಲ್ಲರಿಗೂ ಅವಕಾಶ ದೊರೆತಿರುವುದರಿಂದ ಕೆಳವರ್ಗದವರೂ ಕೂಡ ಉನ್ನತ ಸ್ಥಾನಗಳಿಗೆ ಹೋಗಲು ಸಾಧ್ಯವಾಗುತ್ತದೆ. ನಾನು ಮೈಸೂರಿಗೆ ಬಂದಾಗ ಕುರುಬರಲ್ಲಿ ನಾನೊಬ್ಬನೇ ವಕೀಲ ಇದ್ದೆ ಎಂದು ಅವರು ನೆನಪಿಸಿಕೊಂಡರು.

ಎಲ್ಲಾ ಮೇಲ್ವರ್ಗದವರೇ ವಕೀಲರಾಗಿದ್ದರು. ಕಳಜಾತಿಯವರಿಗೆ ವಕೀಲರಾಗುವುದು ಬೇಡ ಎಂದೂ ಹೇಳುತ್ತಿದ್ದರು. ನನಗೇ ಇದರ ಅನುಭವವಾಗಿದೆ ಎಂದರು. ಶಾನುಭೋಗರೊಬ್ಬರು ಮಗನನ್ನು ಕಾನೂನು ಕಲಿಸಬೇಡ ಎಂದು ತಮ್ಮ ತಂದೆಗೆ ಹೇಳಿದ್ದರು. ಅವರ ಮಾತು ಕೇಳಿ ಕಾನೂನು ಓದದೇ ಹೋಗಿದ್ದರೆ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಎಲ್ಲಾ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸಮುದಾಯದಿಂದ ಬಂದವರು. ಅವರಿಗೆ ಬರೋಡಾ ಮಹಾರಾಜರು ವಿದೇಶಕ್ಕೆ ತೆರಳಲು ಅವಕಾಶ ನೀಡದೆ ಹೋಗಿದ್ದರೆ, ಇಂಥ ಸಂವಿಧಾನ ಸಿಗುತ್ತಿರಲಿಲ್ಲ. ಸಂವಿಧಾನವನ್ನು ವಿರೋಧಿಸುವವರೂ ಇದ್ದಾರೆ ಸಮಾಜದಲ್ಲಿ. ವಿದ್ಯಾರ್ಥಿ ದಿಸೆಯಲ್ಲಿಯೇ ಮಕ್ಕಳ ತಲೆ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಎಳೆ ವಯಸ್ಸಿನಲ್ಲಿ ಸಂವಿಧಾನದ ವಿರುದ್ಧ ದಾರಿತಪ್ಪಿಸುತ್ತಾರೆ. ಬಡವರಿಗೆ, ದಲಿತರಿಗೆ ಮತ್ತು ಅವಕಾಶ ವಂಚಿತರಿಗೆ ನ್ಯಾಯ ಸಿಗಬೇಕು. ಸಂವಿಧಾನದ ವಿರುದ್ಧ ಇರುವವರಿಂದ ನ್ಯಾಯ, ಬಡವರಿಗೆ ರಕ್ಷಣೆ ಸಿಗಲು ಸಾಧ್ಯವೇ? ಈ ಬಗ್ಗೆ ಗಂಭೀರವಾಗಿ ಚರ್ಚೆ ಆಗಬೇಕಿದೆ. ಇಂಥಹ ಸಮಾವೇಶಗಳನ್ನು ಮಾಡುವಾಗ ಈ ವಿಚಾರಗಳ ಬಗ್ಗೆ ಚರ್ಚಿಸಬೇಕು ಎಂದಿದ್ದಾರೆ. ಇದನ್ನೂ ಓದಿ: 7 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಚಿಕ್ಕೋಡಿ ಆಸ್ಪತ್ರೆ – ಜನರ ಗೋಳು ಕೇಳೋರಿಲ್ಲ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

Share This Article
Facebook Whatsapp Whatsapp Telegram
Previous Article Chikkodi 4 7 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಚಿಕ್ಕೋಡಿ ಆಸ್ಪತ್ರೆ – ಜನರ ಗೋಳು ಕೇಳೋರಿಲ್ಲ
Next Article ELECTION COMMISSION OF INDIA ರಾಜೀನಾಮೆ, ನಿವೃತ್ತಿಯಿಂದ ತೆರವಾಗುತ್ತಿರುವ ಶಿಕ್ಷಕರು-ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ

Latest Cinema News

Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories

You Might Also Like

Yoga Guru Niranjana Murty
Bengaluru City

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ – ಯೋಗ ಗುರು ನಿರಂಜನಾ ಮೂರ್ತಿ ಅರೆಸ್ಟ್

19 minutes ago
Uttarakhand Chamoli cloudburst
Latest

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – 5ಕ್ಕೂ ಹೆಚ್ಚು ಜನ ನಾಪತ್ತೆ, ಕಟ್ಟಡಗಳು ನೆಲಸಮ

47 minutes ago
Rajegowda
Bengaluru City

ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

56 minutes ago
Dharmasthala Chinnayya
Dakshina Kannada

ಧರ್ಮಸ್ಥಳ ಕೇಸ್ | ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ

1 hour ago
US Citizen Killed
Crime

75ರ ವೃದ್ಧನ ಮದುವೆಯಾಗಲು ಭಾರತಕ್ಕೆ ಬಂದಿದ್ದ ಅಮೆರಿಕದ 71ರ ವೃದ್ಧೆ ಕೊಲೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?