ಚಿತ್ರದುರ್ಗ: ಜಿಲ್ಲೆಯ ಮಲ್ಲಾಪುರ (Mallapura) ಗ್ರಾಮದ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನನಪ್ಪಿದ್ದಾರೆ.
ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೃತರನ್ನು ಸಂಗನಬಸಪ್ಪ(36), ರೇಖಾಂಶ(29), ಭೀಮಾಶಂಕರ್(26) ಹಾಗೂ ಅಗಸ್ತ್ಯ(8) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಮೂಲದ ಒಂದೇ ಕುಟುಂಬದವರು.
ವಿಜಯಪುರದಿಂದ (Vijayapura) ಚಿಕ್ಕಮಗಳೂರಿಗೆ (Chikkamagaluru) ತೆರಳುವ ವೇಳೆ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಅವಘಡದಲ್ಲಿ ಆದರ್ಶ(3), ಪುತ್ರಿ ಅನ್ವಿಕಾ(5) ಹಾಗೂ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ವೆಬ್ ಸಿರೀಸ್‍ನಿಂದ ಪ್ರೇರಣೆ – ದಂಪತಿ ಕೊಲೆಗೈದು ದರೋಡೆ ಮಾಡಿದ್ದ ಲಾ ಸ್ಟೂಡೆಂಟ್ ಅರೆಸ್ಟ್
ಘಟನಾ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಿಂದ ವಾಪಸ್ ಆಗುತ್ತಿದ್ದಾಗ ಅಪಘಾತ – ತಾಯಿ, ಮಗ ಸ್ಥಳದಲ್ಲೇ ಸಾವು
Web Stories