ಶಿವಮೊಗ್ಗ: ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಕೃಷಿ ಮಂತ್ರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ತನಿಖೆಗೆ ಆದೇಶಿಸಿದ್ದಾರೆ ಕಾದು ನೋಡೋಣ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (B.S.Yediyurappa) ಹೇಳಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜಕೀಯವಾಗಿ ಸರ್ಕಾರದ ಮಂತ್ರಿಗಳ ಮೇಲೆ ನಿರಂತರ ಭ್ರಷ್ಟಾಚಾರದ (Corruption) ಆರೋಪ ಕೇಳಿ ಬರುತ್ತಿದೆ. ಭ್ರಷ್ಟಾಚಾರದ ಆರೋಪಗಳು ತನಿಖೆಗಳ ಮೂಲಕ ಹೊರ ಬರಬೇಕು ಮತ್ತು ಸಚಿವರನ್ನು ಕ್ಯಾಬಿನೆಟ್‌ನಿಂದ ಕೈಬಿಡಬೇಕೆಂದು ಹೇಳಿದರು. ಇದನ್ನೂ ಓದಿ: ಗುದ್ದಲಿ ಪೂಜೆನೇ ಆಗಿಲ್ಲ, ಕಮಿಷನ್ ಎಲ್ಲಿಂದ?- ಬಿಜೆಪಿಗೆ ಹೆಬ್ಬಾಳ್ಕರ್ ತಿರುಗೇಟು
ಮುಂಬರುವ ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ಶೀಘ್ರವೇ ತಯಾರಿಸಲಾಗುವುದು. ಹಿಂದಿನ ಚುನಾವಣೆಯಂತೆ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ (BJP) 25 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ ಇತ್ತು: ಡಾ.ಶರಣ ಪ್ರಕಾಶ್ ಪಾಟೀಲ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]