ಬೆಂಗಳೂರು: ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನವನ್ನು (77th Independence Day) ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಗಳಿಗೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರು ಭಾರತದ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್‌ಡಿಡಿ ಬೆಂಗಳೂರಿನ (Bengaluru) ತಮ್ಮ ನಿವಾಸದಲ್ಲಿ 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿದ್ದಾರೆ. ಮನೆಯ ಬಾಲ್ಕನಿಯಲ್ಲಿ ತಿರಂಗಾ ಹಿಡಿದು ಸಂಭ್ರಮಿಸಿದ್ದಾರೆ.
ಎಲ್ಲಾ ಭಾರತೀಯರಿಗೆ 77ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸೋಣ ಮತ್ತು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಏಕತೆಗೆ ನಮ್ಮ ಕೊಡುಗೆ ನೀಡೋಣ. pic.twitter.com/mVdhH0MWL0
— H D Deve Gowda (@H_D_Devegowda) August 15, 2023
ಸ್ವತಂತ್ರ್ಯ ದಿನದ ಹಿನ್ನೆಲೆ ಟ್ವೀಟ್ ಮಾಡಿ ಜನತೆಗೆ ಶುಭ ಕೋರಿದ ಅವರು, 77ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸೋಣ ಮತ್ತು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಏಕತೆಗೆ ನಮ್ಮ ಕೊಡುಗೆ ನೀಡೋಣ ಎಂದಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷ ಸಿಗೋಣ; ಸ್ವಾತಂತ್ರ‍್ಯ ದಿನದ ಭಾಷಣದಲ್ಲಿ ಲೋಕಸಭೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸ್ಮರಣಾರ್ಥವಾಗಿ ಕಳೆದ ವರ್ಷದಂತೆ ಈ ವರ್ಷವೂ ಆಗಸ್ಟ್ 13ರಿಂದ 15ರ ವರೆಗೆ ಹರ್ ಘರ್ ತಿರಂಗಾ ಅಭಿಮಾನದಲ್ಲಿ ಭಾಗವಹಿಸುವಂತೆ ಜನತೆಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಅಂದು ಬ್ರಿಟಿಷರು ಭಾರತದ ಸಂಪತ್ತನ್ನ ಹೊತ್ತೊಯ್ದರು, ಇಂದು ಬಂಡವಾಳಿಗರ ಬಳಿ ಶೇಖರಣೆಗೊಳ್ತಿದೆ: ಸಿದ್ದರಾಮಯ್ಯ
Web Stories