ಬೆಂಗಳೂರು: ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ದೇವಸ್ಥಾನಗಳ (Temple) ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ ಅನುದಾನಕ್ಕೆ ಕಾಂಗ್ರೆಸ್ ಸರ್ಕಾರ (Congress Government) ಬ್ರೇಕ್ ಹಾಕಿದೆ. 2022-23ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನ ಬಳಕೆ ಮಾಡದಂತೆ ಮುಜರಾಯಿ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಆಗಸ್ಟ್ 14 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿರುವ ಮುಜರಾಯಿ ಇಲಾಖೆ (Muzrai Department) ದೇವಾಲಯದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕೆ ಮಂಜೂರಾದ ಹಣದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಡೆಸದಂತೆ ಉಲ್ಲೇಖಿಸಿದೆ. ಇದನ್ನೂ ಓದಿ: ಡ್ಯಾಂನಲ್ಲಿ ತುಂಬಿ ಹಿಡಿದುಟ್ಟುಕೊಳ್ಳಲು ಆಗದೇ ಇದ್ದಾಗ ತಮಿಳುನಾಡಿಗೆ ನೀರು ಬಿಟ್ಟಿದ್ವಿ: ಹೆಚ್‍ಡಿಕೆ
ಸರ್ಕಾರದ ಆದೇಶ ಏನಿದೆ?
1. ಸರ್ಕಾರದಿಂದ ದೇವಾಲಯಗಳ ಅಭಿವೃದ್ಧಿ ಜೀರ್ಣೋದ್ಧಾರಕ್ಕಾಗಿ ಸಾಮಾನ್ಯ ಯೋಜನೆಯಡಿ ಅನುದಾನ ಮಂಜೂರಾಗಿದ್ದು ಕಾಮಗಾರಿಗಳನ್ನ ಪ್ರಾರಂಭಿಸಿದೆ ಇರುವ ಸಂಸ್ಥೆಗಳಿಗೆ ಮುಂದಿನ ನಿರ್ದೇಶನದ ವರೆಗೂ ಹಣ ಬಿಡುಗಡೆ ಮಾಡಬಾರದು.
2.2022-23ನೇ ಸಾಲಿನಲ್ಲಿ ಸಾಮಾನ್ಯ ಯೋಜನೆ ಅಡಿ ಮಂಜೂರಾಗಿರುವ ಅನುದಾನದ ಪೈಕಿ ಈಗಾಗಲೇ 50% ರಷ್ಟು ಹಣ ಬಿಡುಗಡೆಯಾಗಿ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ಹಣ ಬಿಡುಗಡೆ ಮಾಡದಿದ್ದಲ್ಲಿ ಸದರಿ ಕಾಮಗಾರಿಗೆ ಹಣವನ್ನ ಬಿಡುಗಡೆ ಮಾಡಬಾರದು ಹಾಗೂ ಪ್ರಾರಂಭಿಸಿದೇ ಇದ್ದಲ್ಲಿ ಕಾಮಗಾರಿಯನ್ನು ಪ್ರಾರಂಭಿಸತಕ್ಕದ್ದಲ್ಲ.
3. ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸ್ವೀಕೃತವಾಗಿದ್ದಲ್ಲಿ ಆಡಳಿತಾತ್ಮಕ ಮಂಜೂರಾತಿಯನ್ನು ಮುಂದಿನ ನಿರ್ದೇಶನವರೆಗೂ ತಡೆಹಿಡಿಯುವುದು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]