ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ (Commercial Tax Department) ಚಾಲಕ ಸಾವಿಗೀಡಾಗಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ವಾಣಿಜ್ಯ ತೆರಿಗೆಯ ಇಲಾಖೆಯ ಇಬ್ಬರು ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗದಗ ರಸ್ತೆಯ ರಿಂಗ್ ರೋಡ್ ಬಳಿ ಮೂರು ವಾಹನಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಇಲಾಖೆಯ ಟಾಟಾ ಸುಮೋ ವಾಹನಕ್ಕೆ ಹಿಂಬಂದಿಯಿಂದ ಲಾರಿ ಬಂದು ಡಿಕ್ಕಿಹೊಡೆದಿದೆ. ಈ ಅವಘಡದಲ್ಲಿ ಇಲಾಖೆಯ ಚಾಲಕ ರಫೀಕ್ ನದಾಪ್ (34) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಾಗೃತಿ ಕಾರ್ಯಕ್ಕಾಗಿ ಅಧಿಕಾರಿಗಳೊಂದಿಗೆ ಅವರು ತೆರಳಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಅಧಿಕೃತವಾಗಿ ಪಾರ್ಟಿ ಬಿಟ್ಟು ಹೊಗ್ತೇನೆಂದು ಯಾರೂ ಹೇಳಿಲ್ಲ: ಉಮೇಶ್ ಜಾಧವ್
ಇದಾದ ಬಳಿಕ ಮತ್ತೊಂದು ವಾಹನ ಬಂದು ಎರಡು ವಾಹನಗಳಿಗೆ ಗುದ್ದಿದೆ. ವಾಹನದಲ್ಲಿದ್ದ ಇಬ್ಬರು ಅಧಿಕಾರಿಗಳು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಪೂರ್ವ ಸಂಚಾರಿ ಠಾಣೆ ಪೊಲಿಸರು (Police) ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Chandrayaan-3 ಲ್ಯಾಂಡಿಂಗ್ ದಿನಾಂಕ, ಸಮಯ ಘೋಷಿಸಿದ ಇಸ್ರೋ – ಇಲ್ಲಿದೆ ನೋಡಿ ವಿವರ..
Web Stories