ಅಣ್ಣ ಚಿರು ನಟನೆಯ ಕೊನೆಯ ಚಿತ್ರದ ಡಬ್ಬಿಂಗ್ ಮುಗಿಸಿದ ಧ್ರುವ ಸರ್ಜಾ

Public TV
2 Min Read
Dhruva Sarja

ಚಿರಂಜೀವಿ ಸರ್ಜಾ (Chiranjeevi Sarja) ಅಭಿನಯದ ಕೊನೆಯ ಚಿತ್ರ ‘ರಾಜ ಮಾರ್ತಾಂಡ’ದ (Raja Marthanda) ಡಬ್ಬಿಂಗ್ (Dubbing)ಕೆಲಸವನ್ನು ಮಾಡಿಕೊಡುವುದಾಗಿ ಧ್ರುವ ಸರ್ಜಾ ಹೇಳಿಕೊಂಡಿದ್ದರು. ಅಣ್ಣನ ಪಾತ್ರಕ್ಕೆ ತಾವೇ ಡಬ್ ಮಾಡುವುದಾಗಿಯೂ ತಿಳಿಸಿದ್ದರು. ಇದೀಗ ಡಬ್ಬಿಂಗ್ ಕೆಲಸವನ್ನೂ ಧ್ರುವ ಸರ್ಜಾ ಪೂರ್ಣಗೊಳಿಸಿದ್ದಾರೆ. ಆ ವಿಡಿಯೋ ವೈರಲ್ ಕೂಡ ಆಗಿದೆ.

Chiranjeevi Sarja 2

ಚಿರು ಸರ್ ನಮ್ಮ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದ್ದರು. ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಆನಂತರ ನಡೆಯ ಬಾರದ ನಟನೆ ನಡೆದದ್ದು ಎಲ್ಲರಿಗೂ ಗೊತ್ತೇ ಇದೆ. ನಾನು ಚಿರು ಅವರ ಪಾರ್ಥಿವ ಶರೀರ ನೋಡಲು ಹೋದಾಗ, ಧ್ರುವ ಸರ್ಜಾ (Dhruva Sarja) ಕೇಳಿದ ಮೊದಲ ಮಾತು, ಅಣ್ಣ ಡಬ್ಬಿಂಗ್ ಮುಗಿಸಿದ್ದಾರಾ? ನಾನು ಇಲ್ಲ ಅಂದೆ. ನಾನು ಮಾಡಿಕೊಡುತ್ತೀನಿ ಅಂದರು. ಹಾಗೆ ಟ್ರೇಲರ್ ಗೆ ಧ್ರುವ ಧ್ವನಿ ನೀಡಿದ್ದಾರೆ. ಮೇಘನಾರಾಜ್ ಹಾಗೂ ಸುಂದರರಾಜ್ ಅವರಂತೂ ನಮ್ಮ ಬೆಂಬಲಕ್ಕೆ ಸದಾ ಇದ್ದಾರೆ. ರಾಯನ್ ರಾಜ್ ಸರ್ಜಾ ಸಹ ನಮ್ಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ ಎಂದಿದ್ದರು ನಿರ್ದೇಶಕ ರಾಮ್ ನಾರಾಯಣ್.

chiranjeevi sarja 1

ಅದೇನೊ ಗೊತ್ತಿಲ್ಲ. ಅವರು ನಟಿಸುವ ಬೇರೆ ಚಿತ್ರಗಳ ಸಂಭಾಷಣೆನ್ನು ಅಲ್ಲೇ ಹೇಳಿ, ಹತ್ತು ನಿಮಿಷಕ್ಕೆ ಮರೆತು ಹೋಗತ್ತಿದ್ದರು. ಆದರೆ ಈ ಚಿತ್ರದ ಸಂಭಾಷಣೆ ಮಾತ್ರ ಯಾವಾಗಲೂ ಹೇಳುತ್ತಿದ್ದರು. ಕೊನೆಗೆ ಚಿರು ಬಂದರೆ ನಾವೆಲ್ಲಾ ಆ ಡೈಲಾಗ್ ಹೇಳುತ್ತಿದ್ದೆವು. ಅಷ್ಟು ಈ ಚಿತ್ರವನ್ನು ಹಚ್ಚಿಕೊಂಡಿದ್ದರು. ಅವರಿಲ್ಲದ ಈ ಸಮಯದಲ್ಲಿ ಚಿತ್ರತಂಡಕ್ಕೆ ಬೆಂಬಲ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಮ್ಮ ಎರಡು ಕುಟುಂಬಗಳ ಸಹಕಾರ ಚಿತ್ರಕ್ಕೆ ಇರಲಿದೆ ಎನ್ನುವುದು ಮೇಘನಾ ರಾಜ್ ಮಾತು. ಇದನ್ನೂ ಓದಿ:‘ಟೈಗರ್ ನಾಗೇಶ್ವರ್ ರಾವ್’ ಟೀಸರ್ ಔಟ್- ಮಾಸ್ ಆಗಿ ಎಂಟ್ರಿ ಕೊಟ್ಟ ರವಿತೇಜ

Chiranjeevi Sarja 1

ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು  ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

 

ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article