ಧನಂಜಯ್ ಹುಟ್ಟು ಹಬ್ಬಕ್ಕೆ ‘ಉತ್ತರಕಾಂಡ’ ಟೀಸರ್

Public TV
2 Min Read
Dhananjay 5

ಡಾಲಿ ಧನಂಜಯ್ (Dhananjay) ನಟನೆಯ ‘ಉತ್ತರಕಾಂಡ’ (Uttarkanda) ಸಿನಿಮಾದ ಮುಹೂರ್ತವಾಗಿ ಹಲವು ತಿಂಗಳುಗಳೇ ಕಳೆದಿವೆ. ಮುಹೂರ್ತದ ನಂತರ ಯಾವುದೇ ಅಪ್ ಡೇಟ್ ನೀಡಿರಲಿಲ್ಲ ಚಿತ್ರತಂಡ. ಸಿನಿಮಾ ಶೂಟಿಂಗ್ ಕೂಡ ಶುರುವಾಗಿಲ್ಲ ಎಂದು ಹೇಳಲಾಗಿತ್ತು. ಇದೀಗ ಚಿತ್ರತಂಡದಿಂದ ಹೊಸ ಅಪ್ ಡೇಟ್ ಸಿಕ್ಕಿದ್ದು, ಧನಂಜಯ್ ಹುಟ್ಟು ಹಬಕ್ಕಾಗಿ ಟೀಸರ್ ರಿಲೀಸ್ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ.

dhananjay 2

ಡಾಲಿ ಹುಟ್ಟು ಹಬ್ಬದ (Birthday) ಮುನ್ನ ದಿನ ಆ.22 ರಂದು ಉತ್ತರಕಾಂಡ ಸಿನಿಮಾದ ಟೀಸರ್ ರಿಲೀಸ್ ಆಗಲಿದ್ದು, ಸಂಜೆ 5.30ಕ್ಕೆ ಸಂತೋಷ ಚಿತ್ರಮಂದಿರದಲ್ಲಿ ಟೀಸರ್ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲಿಯೇ ಸಿನಿಮಾ ಟೀಮ್ ನೆಚ್ಚಿನ ನಟನ ಹುಟ್ಟು ಹಬ್ಬವನ್ನೂ ಆಚರಿಸಲಿದೆ.

dhananjay 1

ಅದ್ದೂರಿ ಹುಟ್ಟು ಹಬ್ಬಕ್ಕೆ ಸಿದ್ಧತೆ

ತನ್ನ ಬರ್ತಡೇ ದಿನ ಅಭಿಮಾನಿಗಳ ಜೊತೆ ಸಮಯ ಕಳೆಯಲು ನಿರ್ಧರಿಸಿರುವ ಡಾಲಿ, ಅಂದು ತಾವು ಯಾವೆಲ್ಲ ಸ್ಥಳದಲ್ಲಿ ಸಿಗುತ್ತೇನೆ ಎನ್ನುವುದನ್ನು ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬದ ದಿನದಂದು ತಾವು ಮನೆಯಲ್ಲಿ ಇರದೇ ಇರುವ ಕಾರಣಕ್ಕಾಗಿ ಯಾರೂ ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

dhananjay 3

ಅಂದು ರಾತ್ರಿಯೇ 11 ಗಂಟೆಯಿಂದ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅಭಿಮಾನಿಗಳ ಜೊತೆ ಕೇಕ್ ಕಟ್ ಮಾಡುವುದಕ್ಕೂ ಡಾಲಿ ಸಿಗುತ್ತಾರಂತೆ. ಆಗಸ್ಟ್ 23ಕ್ಕೆ ಡಾಲಿ ಹುಟ್ಟು ಹಬ್ಬ. ಅಂದು ಮತ್ತೆ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೂ ನಂದಿ ಲಿಂಕ್ಸ್ ಗ್ರೌಂಡ್‍ ನಲ್ಲೇ ಧನಂಜಯ್ ಅಭಿಮಾನಿಗಳೊಂದಿಗೆ ಸಮಯ ಕಳೆಯುವುದಾಗಿ ತಿಳಿಸಿದ್ದಾರೆ. ಹುಟ್ಟು ಹಬ್ಬಕ್ಕೆ ಬರುವವರು ಕೇಕ್, ಹಾರ ತರಬೇಡಿ ಎಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ.

Dhananjay 4

ಬಾರಿಯ ಹುಟ್ಟುಹಬ್ಬವನ್ನು ಅಭಿಮಾನಿಗಳು ಡಾಲಿ ಉತ್ಸವ ಹೆಸರಿನಲ್ಲಿ ಆಚರಿಸುತ್ತಿದ್ದಾರೆ. ಡಾಲಿ ಉತ್ಸವ ಎಂದು ಹೆಸರಿಟ್ಟುಅಭಿಮಾನದ ತೇರು ಎಳೆಯೋಣ ಬನ್ನಿಎಂದು ಟ್ಯಾಗ್ ಲೈನ್ ಇಡಲಾಗಿದೆ. ಇಂದಿನಿಂದಲೇ ಅಭಿಮಾನಿಗಳು ಉತ್ಸವಕ್ಕೆ ರೆಡಿಯಾಗಿದ್ದಾರೆ. 4 ವರ್ಷಗಳ ಬಳಿಕ ಅದ್ದೂರಿಯಾಗಿ ಅಭಿಮಾನಿಗಳ ಜೊತೆ ಡಾಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಡಾಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 10 ವರ್ಷಗಳಾಗಿದೆ. ಹಾಗಾಗಿ ಬಾರಿಯ ಹುಟ್ಟುಹಬ್ಬ ಧನಂಜಯ್ ಅವರಿಗೆ ತುಂಬಾ ವಿಶೇಷವಾಗಿದೆ.

 

ನೆರೆ, ಕೊರೊನಾ, ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಕಾರಣದಿಂದ ಧನಂಜಯ್ ಕಳೆದ 4 ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಅಭಿಮಾನಿಗಳ ಕೈಗೂ ಸಿಕ್ಕಿರಲಿಲ್ಲ. ಹಾಗಾಗಿ ಬಾರಿ ದೊಡ್ಡ ಮಟ್ಟದಲ್ಲಿ ಬರ್ತಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದು ಹುಟ್ಟುಹಬ್ಬದ ದಿನ ಅಭಿಮಾನಿಗಳ ಜೊತೆಯೇ ಸಮಯ ಕಳೆಯಲು ನಿರ್ಧರಿಸಿದ್ದಾರೆ.

 

Web Stories

Share This Article