ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇಯಲ್ಲಿ ಕಂಟೈನರ್ ಪಲ್ಟಿ; ಇಬ್ಬರು ಸಾವು, ನಾಲ್ವರಿಗೆ ಗಾಯ

Public TV
1 Min Read
MAHARASHTRA CONTAINER

ರಾಯಗಢ: ಕಂಟೈನರ್‌ (Container) ಪಲ್ಟಿಯಾಗಿ ಡಿವೈಡರ್ ಜಿಗಿದು ಐದು ಕಾರುಗಳಿಗೆ (Car) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಮಹಾರಾಷ್ಟ್ರದ (Maharashtra) ರಾಯಗಢ (Raigad) ಜಿಲ್ಲೆಯ ಮುಂಬೈ- ಪುಣೆ ಎಕ್ಸ್‌ಪ್ರೆಸ್ ವೇಯಲ್ಲಿ (Mumbai-Pune Expressway) ನಡೆದಿದೆ.

ಜಿಲ್ಲೆಯ ಖೋಪೋಲಿ ಪ್ರದೇಶದಲ್ಲಿ ಬೆಳಗ್ಗೆ 9 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಕಂಟೈನರ್ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಂಟೈನರ್ ಪಲ್ಟಿ ಹೊಡೆದು ಎದುರಿನಿಂದ ಇನ್ನೊಂದು ಲೇನ್‌ನಲ್ಲಿ ಬರುತ್ತಿದ್ದ ಐದು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್ – ಏಳು ಮಂದಿ ದುರ್ಮರಣ

ಪುಣೆಯಿಂದ ಮುಂಬೈಗೆ ತೆರಳುತ್ತಿದ್ದ ಕಂಟೈನರ್ ಅತಿವೇಗದ ಕಾರಣ ನಿಯಂತ್ರಣ ತಪ್ಪಿ ಇನ್ನೊಂದು ಲೇನ್‌ಗೆ ದಾಟಿದ ಬಳಿಕ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ತುಂಬಿ ಹರಿಯುತ್ತಿರುವ ಡ್ಯಾಂನಲ್ಲಿ ಸಿಲುಕಿದ 10 ಮಂದಿ – ರಕ್ಷಣೆಗೆ ಹರಸಾಹಸ

ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಇದನ್ನೂ ಓದಿ: ವೀಸಾ ಅವಧಿ ಮುಗಿದರೂ ಗುಜರಾತ್‌ನಲ್ಲಿ ಅಕ್ರಮ ನೆಲೆ – 45 ಪಾಕಿಸ್ತಾನಿ ಹಿಂದೂಗಳ ಬಂಧನ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article