ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರೈ (Prakash Raj) ಚಂದ್ರಯಾನ (Chandrayaan 3) ಕುರಿತಂತೆ ಟ್ವೀಟ್ (Tweet) ಮಾಡಿ ವಿವಾದವನ್ನು (Controversy) ಮೈಮೇಲೆ ಎಳೆದುಕೊಂಡಿದ್ದಾರೆ. ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ‘ಚಾಯ್ ವಾಲಾ’ ಫೋಟೋ ಹಾಕಿದ್ದಾರೆ. ಅವರ ಈ ವರ್ತನೆಗೆ ಅನೇಕರು ಕಿಡಿಕಾರಿದ್ದಾರೆ.
ಇಡೀ ದೇಶವೇ ಹೆಮ್ಮೆ ಪಡುವಂತೆ ನಿಮ್ಮ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಜಗತ್ತೇ ಈ ಕೆಲಸಕ್ಕಾಗಿ ಕೊಂಡಾಡುತ್ತಿದೆ. ಆದರೆ, ಪ್ರಕಾಶ್ ರೈ ಈ ರೀತಿ ಗೇಲಿ ಮಾಡುವುದು ಸರಿಯಲ್ಲ. ಭಾರತದ ಅಸ್ಮಿತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.
ಪ್ರಕಾಶ್ ರೈ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಹೆಸರಾಂತ ನಟನಾಗಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎನ್ನುವುದನ್ನು ಕಲಿಸಬೇಕಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪ್ರಕಾಶ್ ರೈ ಪರವಾಗಿ ಕಾಮೆಂಟ್ ಮಾಡಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]