ಆಪರೇಷನ್ ಹಸ್ತ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಂಪರ್

Public TV
1 Min Read
siddaramaiah s.t.somshekar

ಬೆಂಗಳೂರು: ಆಪರೇಷನ್ ಹಸ್ತ (Operation Hasta) ಬೆನ್ನಲ್ಲೇ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ. ಎಸ್.ಟಿ.ಸೋಮಶೇಖರ್ (S.T.Somshekar) ಶಾಸಕರಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ 7.63 ಕೋಟಿ ರೂ. ಅನುದಾನ ನೀಡಲಾಗಿದೆ.

ಶಾಸಕ ಎಸ್.ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆಂಬ ಚರ್ಚೆ ಬೆನ್ನಲ್ಲೇ, ಬಿಬಿಎಂಪಿಯಿಂದ ಅನುದಾನ ಮಂಜೂರಿನ ಆದೇಶ ಬಂದಿದೆ. ಈ ಕ್ಷೇತ್ರಕ್ಕೆ ಕುಡಿಯುವ ನೀರಿಗೆ 7.63 ಕೋಟಿ ರೂ. ಅನುದಾನ ಕಲ್ಪಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

d.k.shivakumar s.t.somashekar

ಕಾಂಗ್ರೆಸ್ ಪಕ್ಷಕ್ಕೆ ಬರುವುದಕ್ಕೆ ಬಿಬಿಎಂಪಿ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಗಿಫ್ಟ್ ನೀಡಿದರೇ ಎಂಬ ಚರ್ಚೆ ಶುರುವಾಗಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಕುಡಿಯುವ ನೀರಿಗಾಗಿ ಅನುದಾನ ನೀಡಲಾಗಿದೆ. 1.63 ಕೋಟಿ ರೂ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ ಮೀಸಲಿಡಲಾಗಿದೆ. ಹೊಸದಾಗಿ ಬೋರ್ವೆಲ್ ಕೊರೆಸಲು 4 ಕೋಟಿ ರೂ. ಹಾಗೂ ನಿರ್ವಹಣೆ ಮಾಡಲು 2 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ತಿಳಿದುಬಂದಿದೆ.

ಆಪರೇಷನ್ ಹಸ್ತದ ಮೊದಲ ವಿಕೆಟ್‌ಗೆ ಅನುದಾನದ ನೆರವು ಸಿಕ್ಕಿದೆ. 7.63 ಕೋಟಿ ರೂ. ಅನುದಾನ ನೀಡಿ ಎಸ್.ಟಿ. ಸೋಮಶೇಖರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಡಿ.ಕೆ. ಶಿವಕುಮಾರ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ

ಆಪರೇಷನ್ ಹಸ್ತ ಎನ್ನುತ್ತಿದ್ದಂತೆ ಮೊದಲ ಹೆಸರು ಕೇಳಿ ಬಂದಿದ್ದೇ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರದ್ದು. ನಿನ್ನೆಯಷ್ಟೆ ಸೋಮಶೇಖರ್ ಬೆಂಬಲಿತ ಮಾಜಿ ಕಾರ್ಪೊರೇಟರ್‌ಗಳು ಕಾಂಗ್ರೆಸ್ ಸೇರಿದ್ದಾರೆ. ಈಗ ಯಶವಂತಪುರ ಕ್ಷೇತ್ರಕ್ಕೆ 7.63 ಕೋಟಿ ಹಣ ಬಿಡುಗಡೆಯಾಗಿದೆ. ಅಧಿಕೃತವಾಗಿ ‘ಕೈ’ ಹಿಡಿಯುವ ಎಸ್.ಟಿ. ಸೋಮಶೇಖರ್ ನಡೆಗೆ ಶೀಘ್ರವಾಗಿ ಮುಹೂರ್ತ ನಿಗದಿಯಾಗುತ್ತಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

Web Stories

Share This Article