ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ವಿಪಕ್ಷಗಳ ಸಲಹೆಯನ್ನು ಸರ್ಕಾರ ಪಡೆಯಲಿದೆ. ಸುಪ್ರೀಂಕೋರ್ಟ್,ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಹಾಗೂ ಮುಂದಿನ ಕಾನೂನು ಹೋರಾಟ ಹೇಗೆ ಎಂಬ ಬಗ್ಗೆಯೂ ಚರ್ಚೆ ಆಗಲಿದೆ.
ಕೂಡಲೇ ತಮಿಳುನಾಡಿಗೆ ನೀರು ಬಂದ್ ಮಾಡಿದರೆ ಎದುರಾಗುವ ಕಾನೂನು ತೊಡಕುಗಳು, ಸವಾಲುಗಳ ಬಗ್ಗೆ ವಕೀಲರ ಅಭಿಪ್ರಾಯವನ್ನು ಸಿಎಂ ಆಲಿಸಲಿದ್ದಾರೆ. ಇದನ್ನೂ ಓದಿ: Chandrayaan-3: ಕೊನೆಯ ಆ 20 ನಿಮಿಷವೇ ಆತಂಕ – ಲ್ಯಾಂಡಿಗ್ ಹೇಗಿರುತ್ತೆ? ಈ ಬಗ್ಗೆ ನೀವು ತಿಳಿಯಲೇಬೇಕು
ಪ್ರತಿಪಕ್ಷಗಳ ಸಲಹೆ ಮೇರೆಗೆ ಮುಂದಿನ ಹೆಜ್ಜೆ ಇಡಲು ಸರ್ಕಾರ ನಿರ್ಧರಿಸಿದೆ. ತಮಿಳುನಾಡಿಗೆ ಪ್ರತಿದಿನ 10,000 ಕ್ಯೂಸೆಕ್ ನೀರು ಹರಿಸಲಾಗುತ್ತದೆ. ಆಗಸ್ಟ್ 31 ರವರೆಗೂ ನಿತ್ಯ 10,000 ಕ್ಯೂಸೆಕ್ ನೀರು ಹರಿಸಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ 21 ಟಿಎಂಸಿಗಿಂತಲೂ ಹೆಚ್ಚು ನೀರು ತಮಿಳುನಾಡಿಗೆ ಬಿಡಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]