ಬೀದರ್: ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂ. ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ. ಸೀನಿಮಿಯ ಶೈಲಿಯಲ್ಲಿ ಕಾರನ್ನು ಚೇಸ್ ಮಾಡಿ 1.18 ಕೋಟಿ ರೂ. ಮೌಲ್ಯದ 118 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.
ರಾಷ್ಟ್ರಿಯ ಹೆದ್ದಾರಿ 9 ರಲ್ಲಿ ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳು ಓಡಿ ಹೋಗಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿಗಳನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಇಬ್ಬರು ಆರೋಪಿಗಳಿದ್ದರು. ಇಬ್ಬರೂ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ದುರ್ಮರಣ
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ರಾಜ್ಯದಲ್ಲಿ ಬೆಂಗಳೂರಿನ ನಂತರ ಬೀದರ್‍ನಲ್ಲೇ ಅತಿ ಹೆಚ್ಚು ಗಾಂಜಾ ಜಪ್ತಿಯಾಗಿದೆ. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]