ದೆಹಲಿ ವಿಮಾನ ನಿಲ್ದಾಣದಲ್ಲಿ 17 ಕೋಟಿ ರೂ. ಮೌಲ್ಯದ ಕೊಕೇನ್ ವಶ – ಇಬ್ಬರು ಕೀನ್ಯಾ ಪ್ರಜೆಗಳ ಬಂಧನ

Public TV
2 Min Read
COCAINE DRUGS

ನವದೆಹಲಿ: ಮಾದಕ ವಸ್ತುಗಳ ಕಳ್ಳಸಾಗಣೆ ವಿರುದ್ಧ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಕಾರ್ಯಾಚರಣೆ ಮುಂದುವರೆಸಿದ್ದು, ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ (Airport) ಕೊಕೇನ್ (Cocaine) ಹೊಂದಿದ್ದ ಕೀನ್ಯಾ (Kenya) ಪ್ರಜೆಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಕೀನ್ಯಾ ಪ್ರಜೆ ನೈರೋಬಿಯಾದಿಂದ ಆಗಮಿಸಿದ್ದು, ಡಿಆರ್‌ಐ ಅಧಿಕಾರಿಗಳು ಅನುಮಾನಗೊಂಡು ಆತನ ಲಗೇಜ್ ಅನ್ನು ಪರಿಶೀಲಿಸಿದಾಗ ಸುಮಾರು 1,698 ಗ್ರಾಂ ಕೊಕೇನ್ ಪತ್ತೆಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಅಂದಾಜು ಮೌಲ್ಯ ಸುಮಾರು 17 ಕೋಟಿ ರೂ.ಗಳಾಗಿದ್ದು, ಅಧಿಕಾರಿಗಳು ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಶ್ಲೀಲ ವೀಡಿಯೋದಲ್ಲಿರುವುದು ಪತ್ನಿ ಎಂದು ಶಂಕಿಸಿ ಕೊಲೆಗೆ ಯತ್ನಿಸಿದ ಪತಿ

ಅಧಿಕಾರಿಗಳ ಪ್ರಕಾರ, ಆರೋಪಿಯು ಮುಂಬೈಗೆ (Mumbai) ಪ್ರಯಾಣಿಸಲು ಟಿಕೆಟ್ ಹೊಂದಿದ್ದು, ಮುಂಬೈನಲ್ಲಿ ಈ ಕೊಕೇನ್ ಅನ್ನು ವಿತರಣೆ ಮಾಡಲು ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆಯಿಂದ ಕೊಕೇನ್ ವಿತರಕ ಹಾಗೂ ಸ್ವೀಕರಿಸಬೇಕಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಕೊಕೇನ್ ಅನ್ನು ಸ್ವೀಕರಿಸಬೇಕಿದ್ದ ಮಹಿಳೆ ಕೂಡಾ ಕೀನ್ಯಾ ದೇಶದ ಪ್ರಜೆಯಾಗಿದ್ದು, ಆಕೆಯನ್ನು ಮುಂಬೈನ ವಸಾಯಿ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪುಟಿನ್‌ ವಿರುದ್ಧ ಬಂಡಾಯವೆದ್ದಿದ್ದ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ದುರ್ಮರಣ

1985ರ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯ ನಿಬಂಧನೆಗಳ ಪ್ರಕಾರ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ – 7 ಮಂದಿ ಅರೆಸ್ಟ್

2023ರ ಜನವರಿಯಿಂದ ಜುಲೈವರೆಗಿನ ಅವಧಿಯಲ್ಲಿ ಡಿಆರ್‌ಐ ದೇಶಾದ್ಯಂತ 42 ಕೊಕೇನ್ ಮತ್ತು ಹೆರಾಯಿನ್ ಪ್ರಕರಣವನ್ನು ಪತ್ತೆಹಚ್ಚಿದೆ. ಒಟ್ಟು 31 ಕೆಜಿಗೂ ಅಧಿಕ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದು, 96 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

Web Stories

Share This Article