ನೈತಿಕ ಪೊಲೀಸ್‍ಗಿರಿ- ಮೂವರು ಆರೋಪಿಗಳ ಬಂಧನ

Public TV
1 Min Read
MANGALURU ARREST 2

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ (Moodabidire) ಮತ್ತೆ ನೈತಿಕ ಪೊಲೀಸ್ ಗಿರಿ (Moral Policing) ನಡೆದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅನ್ಯಕೋಮಿನ ವಿದ್ಯಾರ್ಥಿಯೋರ್ವ ಹಿಂದೂ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದನ್ನು ಪ್ರಶ್ನಿಸಿ ಮೂವರು ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ. ಕಳೆದ ಆಗಸ್ಟ್ 22 ರಂದು ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಈ ಘಟನೆ ನಡೆದಿದೆ. ಅಂದು ರಾತ್ರಿ ಬೆಂಗಳೂರಿಗೆ ತೆರಳಲು ಹಿಂದೂ ವಿದ್ಯಾರ್ಥಿನಿಯೋರ್ವಳು ಮೂಡಬಿದ್ರೆಯ ಕೋಟೆಬಾಗಿಲು ಸಮೀಪ ಇದ್ದು ಆ ವೇಳೆ ಮುಸ್ಲಿಂ ವಿದ್ಯಾರ್ಥಿಯೋರ್ವ ಆಕೆಯೊಂದಿಗೆ ಮಾತನಾಡಿದ್ದ. ಬಳಿಕ ಯುವತಿ ಬಸ್ ಹತ್ತಿ ಬೆಂಗಳೂರಿಗೆ ತೆರಳಿದ್ದಾಳೆ. ಇದನ್ನೂ ಓದಿ: ಮುಂದಿನ ಪ್ರಾಜೆಕ್ಟ್‌ ಗಗನಯಾನಕ್ಕೂ ನಮ್ಮ ಕಂಪನಿಯಲ್ಲಿ ಬಿಡಿಭಾಗ ತಯಾರಿ: ಚಂದ್ರಯಾನ-3 ರಾಕೆಟ್‌ಗೆ ಬಿಡಿಭಾಗ ಪೂರೈಸಿದ್ದ ಬೆಳಗಾವಿ ದೀಪಕ್‌ ಮಾತು

ಈ ವೇಳೆ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂಬಾಲಿಸಿಕೊಂಡು ಬಂದ ಮೂವರು ಯುವಕರು ಮೂಡಬಿದ್ರೆಯ ರಾಜೀವ್ ಗಾಂಧಿ ಸಂಕೀರ್ಣದ ಬಳಿ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ. ಇದೀಗ ಮೂವರು ಆರೋಪಿಗಳಾದ ಅಭಿಲಾಷ್, ಪ್ರೇಮ್ ಭಂಡಾರಿ ಹಾಗೂ ಸಂಜಯ್ ನನ್ನು ಪ್ರಕರಣ ದಾಖಲಿಸಿಕೊಂಡ ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article