ನವದೆಹಲಿ: ಕಾವೇರಿ ನದಿ (Cauvery River Water Dispute) ನೀರು ಹರಿಸಲು ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕದ (Karnataka) ವಿರುದ್ಧ ತಮಿಳುನಾಡು (Tamil Nadu) ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ನಡೆಸಲಿದೆ.
ನ್ಯಾ. ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ. ಕರ್ನಾಟಕ, ಸುಪ್ರೀಂ ಕೋರ್ಟ್ ಆದೇಶದನ್ವಯ ತಮಿಳುನಾಡಿಗೆ ನೀರು ಹರಿಸುತ್ತಿಲ್ಲ. ಜೂನ್, ಜುಲೈ ತಿಂಗಳ ನೀರು ಬಾಕಿ ಉಳಿಸಿಕೊಂಡಿದ್ದು ಆಗಸ್ಟ್ ತಿಂಗಳ ನೀರು ಸೇರ್ಪಡೆಯಾಗಲಿದೆ. ಕರ್ನಾಟಕ ಒಟ್ಟು 36.76 ಟಿಎಂಸಿ ನೀರು ಬಾಕಿ ಉಳಿಸಿಕೊಂಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆ ಬಳಿಕವೂ ಸಮರ್ಪಕ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದೆ. ಇದನ್ನೂ ಓದಿ: ಚುನಾವಣಾ ಅಕ್ರಮ ಆರೋಪ – ಡೊನಾಲ್ಡ್ ಟ್ರಂಪ್ ಅರೆಸ್ಟ್
ಇದಕ್ಕೆ ಪ್ರತಿಯಾಗಿ ಅಫಿಡವಿಟ್ ಸಲ್ಲಿಸಿರುವ ಕರ್ನಾಟಕ, ಕಾವೇರಿ ನ್ಯಾಯಧಿಕರಣ ಆದೇಶಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುರುವೈ ಬೆಳೆ ಬೆಳೆದಿರುವ ತಮಿಳುನಾಡು, ಅದಕ್ಕೆ ನೀರು ಒದಗಿಸಲು ಕರ್ನಾಟಕದ ಮೇಲೆ ಒತ್ತಡ ಹೇರುತ್ತಿದೆ. ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ಅವಧಿಯಲ್ಲೂ ತಮಿಳುನಾಡು ಸಾಮಾನ್ಯ ಜಲ ವರ್ಷದ ನೀರಿನ ಪಾಲು ಕೇಳುತ್ತಿದೆ ಎಂದು ಆರೋಪಿಸಿದೆ.
ಕಾವೇರಿ ಜಲಾನಯನದಲ್ಲಿರುವ ನೀರು ಸದ್ಯಕ್ಕೆ ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ 42% ಮಳೆ ಕೊರತೆಯಾಗಿದೆ. ಈಗ ತಮಿಳುನಾಡಿಗೆ ನೀರು ಹರಿಸಿದರೆ ರಾಜ್ಯದಲ್ಲಿರುವ ಪ್ರಸುತ್ತ ಬೆಳೆ ಮತ್ತು ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ. ಈ ಎಲ್ಲ ಸವಾಲುಗಳ ನಡುವೆ CWMA ಆದೇಶದ ಬಳಿಕ ಕರ್ನಾಟಕ ತಮಿಳುನಾಡಿಗೆ ಕರ್ನಾಟಕ ನೀರು ಹರಿಸಿದೆ. ಆದರೆ ಸಾಮಾನ್ಯ ವರ್ಷದ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಎರಡು ಅಂಶಗಳನ್ನು ಆಧರಿಸಿ ಕೋರ್ಟ್ ವಾದ ಮತ್ತು ಪ್ರತಿವಾದವನ್ನು ಆಲಿಸಲಿದೆ. ಇದನ್ನೂ ಓದಿ: ಬೆಂಗಳೂರಿಗೆ ಮೋದಿ ಆಗಮನ ಹಿನ್ನೆಲೆ ಸಂಚಾರದಲ್ಲಿ ಬದಲಾವಣೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]