ದಾವಣಗೆರೆ: ಅತ್ಯಾಚಾರ ಪ್ರಕರಣದಲ್ಲಿ ಬಂಧಿಯಾಗಿದ್ದ ಆರೋಪಿಯೊಬ್ಬ ಜೈಲಿನಿಂದ ಪರಾರಿಯಾದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ. ಆರೋಪಿಯ ಕಾಲಿಗೆ ಪೆಟ್ಟಾಗಿದ್ದರೂ ಸಹ ಜೈಲಿನ (Jail) ಗೋಡೆಯನ್ನು ಜಿಗಿದು ಪರಾರಿಯಾಗಿದ್ದಾನೆ.
ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾದ ಆರೋಪಿಯನ್ನು ವಸಂತ್ (23) ಎಂದು ಗುರುತಿಸಲಾಗಿದೆ. ಆರೋಪಿ ನಗರದ ಹೊರವಲಯದ ಕರೂರು ನಿವಾಸಿಯಾಗಿದ್ದಾನೆ. ಈತ ಆಟೋ ಚಾಲಕನಾಗಿದ್ದು, ಈತನ ವಿರುದ್ಧ ಎರಡು ದಿನಗಳ ಹಿಂದೆ ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಇದನ್ನೂ ಓದಿ: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ
ನಾಪತ್ತೆಯಾದ ಸ್ವಲ್ಪ ಸಮಯದ ಬಳಿಕ ಜೈಲಿನ ಸಿಬ್ಬಂದಿಗೆ ಮಾಹಿತಿ ಸಿಕ್ಕಿದೆ. ಕೂಡಲೇ ಸಿಬ್ಬಂದಿ ಬಸವನಗರ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಸೆರೆಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಸತ್ಯೇಂದ್ರ ಜೈನ್ ಜೈಲಲ್ಲಿ ಸ್ವಿಮ್ಮಿಂಗ್ ಪೂಲ್ ಕೇಳ್ತಿದ್ದಾರೆ – ಸುಪ್ರೀಂ ಕೋರ್ಟ್‌ಗೆ ED ಮಾಹಿತಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]