ಲಕ್ನೋ: ತನ್ನ ಸೊಸೆಯನ್ನು ಲೈಂಗಿಕ ದೌರ್ಜನ್ಯದಿಂದ ಕಾಪಾಡಲು ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ಉತ್ತರ ಪ್ರದೇಶದ (Uttar Pradesh) ಬದೌನ್‍ನಲ್ಲಿ ನಡೆದಿದೆ.
ತೇಜೇಂದರ್ ಸಿಂಗ್ (43) ಹತ್ಯೆಯಾದ ವ್ಯಕ್ತಿ. ಮೊದಲಿಗೆ ಅಪರಿಚಿತರು ಆತನನ್ನು ಕೊಲೆಗೈದಿದ್ದಾರೆ ಎಂದು ಮೃತನ ಪತ್ನಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದರು. ಆದರೆ ತನಿಖೆ ವೇಳೆ ಆತನ ಪತ್ನಿಯೇ ಕೊಲೆಗೈದಿರುವುದಾಗಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಸಂವಹನ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿ.ಕೆ. ರವಿ ಆಯ್ಕೆ
ತನಿಖೆ ವೇಳೆ ಹತ್ಯೆಗೊಳಗಾದವನ ಪತ್ನಿ ಮಿಥಿಲೇಶ್ ದೇವಿ (40) ತನ್ನ ಪತಿ ವಿಪರೀತ ಹೊಡೆಯುತ್ತಿದ್ದ. ಅಲ್ಲದೇ 19 ವರ್ಷದ ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದರಿಂದ ಆತ ಮಲಗಿದ್ದಾಗ ಕೊಡಲಿಯಿಂದ ಕತ್ತು ಸೀಳಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರಂಭದಲ್ಲಿ ಮಹಿಳೆ ತನಿಖೆಯ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾಳೆ. ಮಹಿಳೆ ವಿಚಾರಣೆ ವೇಳೆ ಪದೇ ಪದೇ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಳು. ಇದರಿಂದಾಗಿ ಪೊಲೀಸರು (Police) ಸಂಶಯಗೊಂಡು ಆಕೆಯನ್ನು ತೀವ್ರ ವಿಚಾರಣೆ ಒಳಪಡಿಸಿದಾಗ ಕೊಲೆಯ ವಿಚಾರ ಹೊರಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ – ಸದ್ದಿಲ್ಲದೆ ಅಂತ್ಯಸಂಸ್ಕಾರ ಮಾಡಿ ಸಿಕ್ಕಿಬಿದ್ದರು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]