ಶಿವರಾಮ್ ಹೆಬ್ಬಾರ್ ಪಕ್ಷಕ್ಕೆ ಬೇಡವೇ ಬೇಡ- ಯಲ್ಲಾಪುರ ಕಾಂಗ್ರೆಸ್ ಕಾರ್ಯಕರ್ತರು

Public TV
1 Min Read
shivaram hebbar

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಹಾಲಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡುತ್ತಿದ್ದಂತೆಯೇ ಇದೀಗ ಯಲ್ಲಾಪುರದಲ್ಲಿ ಈ ಹಿಂದೆ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ವೀಡಿಯೋ ವೈರಲ್ ಆಗುತ್ತಿದೆ.

ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹೆಬ್ಬಾರ್ ಕಾಂಗ್ರೆಸ್ (Congress) ಸೇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನಿಂದ ಶಾಸಕರೇ ಬೇಡ ಇರುವ ಸರ್ಕಾರವನ್ನು ಕೆಡವಿ ಹೋದವರು ಮತ್ತೆ ಕಾಂಗ್ರೆಸ್ ಗೆ ಬಂದ್ರೆ ಅವರನ್ನ ಪಕ್ಷ ಶಾಸಕರನ್ನಾಗಿ ಮಾಡುವುದಿಲ್ಲ ಎಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಿದ್ರೆ ಎಂಪಿಯನ್ನಾಗಿ ಮಾಡುತ್ತೇವೆ ಎಂದು ಸಭೆಯಲ್ಲಿ ಆಡಿದ ಮಾತುಗಳು ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ.  ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 7 ಜನರ ದುರ್ಮರಣ

ಯಲ್ಲಾಪುರದಲ್ಲಿ (Yallapur) ಇದೇ ತಿಂಗಳು 22 ರಂದು ಶಿವರಾಮ್ ಹೆಬ್ಬಾರ್ ಪಕ್ಷಕ್ಕೆ ಸೇರ್ಪಡೆ ವಿಚಾರವಾಗಿ ಬೂತ್ ಮಟ್ಟದ ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದ್ದ ವೇಳೆ ಈ ಮಾತುಗಳು ಕೇಳಿಬಂದಿದೆ ಎಂದು ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಮೂಲಗಳು ಹೇಳಿವೆ.

Web Stories

Share This Article