ಹಾವೇರಿಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ – ಮೂವರು ಕಾರ್ಮಿಕರು ಸಜೀವ ದಹನ

Public TV
1 Min Read
haveri fire

ಹಾವೇರಿ: ಹಾವೇರಿ (Haveri) ಹೊರವಲಯದ ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ಗೋದಾಮಿಗೆ (Firecracker Godown) ಬೆಂಕಿ ತಗುಲಿದ ಪರಿಣಾಮ ಮೂವರು ಕಾರ್ಮಿಕರು ಸಜೀವ ದಹನ ಆಗಿರುವ ದುರ್ಘಟನೆ ನಡೆದಿದೆ.

ದ್ಯಾಮಪ್ಪ ಓಲೇಕಾರ, ರಮೇಶ್ ಬಾರ್ಕಿ ಹಾಗೂ ಶಿವಲಿಂಗ ಅಕ್ಕಿ ಎಂಬವರ ಮೃತದೇಹ ಪತ್ತೆಯಾಗಿದೆ. ಮೃತರು ತಾಲೂಕಿನ ಕಾಟೇನಹಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಇವರು ಪಟಾಕಿ ಅಂಗಡಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಪಟಾಕಿ ಸಂಗ್ರಹ ಘಟಕಕ್ಕೆ ಬೆಂಕಿ – 1.5 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮ

FIRE 1

ಗಣೇಶ ಹಬ್ಬದ ನಿಮಿತ್ತವಾಗಿ ಪಟಾಕಿ ಸಾಮಾಗ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದವು. ಹೀಗಾಗಿ ಮಾಲೀಕರು ಕೆಲಸಕ್ಕೆಂದು ಆಳುಗಳನ್ನು ಕರೆತಂದಿದ್ದರು. ಬೆಳಗ್ಗೆ 11 ಗಂಟೆಯಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೆ 3 ಮೃತದೇಹಗಳನ್ನು ಶವಗಾರಕ್ಕೆ ಸಾಗಿಸಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಗಣೇಶನ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ, ಪ್ರತಿ ವರ್ಷದಂತೆ ಈ ವರ್ಷವೂ ಕೋಟ್ಯಂತರ ರೂಪಾಯಿ ಮೌಲ್ಯದ ಪಟಾಕಿ ತರಲಾಗಿತ್ತು. ಆದರೆ ಒಂದೇ ಒಂದು ಸಣ್ಣ ಬೆಂಕಿಯ ಕಿಡಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಇಡೀ ಗೋದಾಮು ಬೆಂಕಿಗೆ ಆಹುತಿ ಆಗಿದೆ. ಭೂಮಿಕಾ ಪಟಾಕಿ ಅಂಗಡಿಯ ಗೋದಾಮಿನಲ್ಲಿ ಸುಮಾರು 1.5 ಕೋಟಿ ರೂ. ಮೌಲ್ಯದ ಪಟಾಕಿ ಇದ್ದವು. ಹಾವೇರಿ ನಿವಾಸಿ ಕುಮಾರ ಸಾತೇನಹಳ್ಳಿ ಎಂಬವರಿಗೆ ಸೇರಿದ ಪಟಾಕಿ ಅಂಗಡಿಯಾಗಿದೆ. ಇದನ್ನೂ ಓದಿ: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಸಾವು

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article