ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ- ಹೆಲ್ತ್ ಬುಲೆಟಿನ್ ರಿಲೀಸ್

Public TV
1 Min Read
HDK 2

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy Health) ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.

ಇಂದು ಬೆಳಗ್ಗಿನ ಜಾವ 3.40ಕ್ಕೆ ಕುಮಾರಸ್ವಾಮಿಯವರು ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಹೆಚ್‍ಡಿಕೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಡಾ. ಸತೀಶ್ಚಂದ್ರ ಹಾಗೂ ವೈದ್ಯರ ತಂಡ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಅವರ ಶೀಘ್ರ ಚೇತರಿಕೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಅಪೋಲೋ ಆಸ್ಪತ್ರೆಯ (Apollo Hospital) ಯೂನಿಟ್ ಹೆಡ್ ಹಾಗೂ ಉಪಾಧ್ಯಕ್ಷ ಡಾ ಗೋವಿಂದಯ್ಯ ಯತೀಶ್ ತಿಳಿಸಿದ್ದಾರೆ.

ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಪತ್ನಿ ಅನಿತಾ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಭೇಟಿ  ನೀಡಿದರು.  ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಇದ್ದರು. ಮಂಗಳವಾರ ತಡರಾತ್ರಿ ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಅಲ್ಲದೇ ಸತತ ಪ್ರವಾಸದ ಹಿನ್ನೆಲೆ ಜ್ವರ ಕಾಣಿಸಿಕೊಂಡಿದ್ದು, ಮಂಗಳವಾರ ತಡರಾತ್ರಿ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಒಂದೊಂದೇ ಮೆಟ್ಟಿಲು ಹತ್ತೋದು ಒಳ್ಳೆಯದು- ಶಾಸಕ ಬಸವರಾಜ್‍ಗೆ ಸಚಿವ ಮಲ್ಲಿಕಾರ್ಜುನ್ ಕ್ಲಾಸ್

ಈ ಹಿಂದೆ ಕೂಡಾ ಚುನಾವಣಾ ಸಮಯದಲ್ಲಿ ನಿರಂತರ ಪ್ರಚಾರದಲ್ಲಿ ತೊಡಗಿದ್ದ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ಇದೀಗ ಎರಡೆರಡು ಬಾರಿ ವಿದೇಶ ಪ್ರವಾಸ ಮಾಡಿದ್ದು, ಸತತ ಪ್ರವಾಸದಿಂದ ಅನಾರೋಗ್ಯ ಕಾಣಿಸಿಕೊಂಡಿದೆ.

Web Stories

Share This Article