ಲಿವಿಂಗ್ ಪಾರ್ಟ್ನರ್ ಮೇಲೆ ಸಂಶಯ- ಯುವತಿಯಿಂದ ಯುವಕನ ಹತ್ಯೆ

Public TV
1 Min Read
RENUKA

ಬೆಂಗಳೂರು: ಯುವತಿಯೊಬ್ಬಳು ಲಿವಿಂಗ್ ಟು ಗೆದರ್‌ನಲ್ಲಿದ್ದ ಸ್ನೇಹಿತನ ಮೇಲಿನ ಸಂಶಯದಿಂದಾಗಿ ಆತನನ್ನು ಹತ್ಯೆಗೈದ ಪ್ರಕರಣ ಹುಳಿಮಾವಿನಲ್ಲಿ (Hulimavu) ನಡೆದಿದೆ.

ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ರೇಣುಕಾ (34) ಎಂದು ಗುರುತಿಸಲಾಗಿದೆ. ಯುವತಿ ಕೇರಳ ಮೂಲದ ಜಾವಿದ್ (24) ಎಂಬಾತನ ಜೊತೆ ಆಪಾರ್ಟ್‍ಮೆಂಟ್ ಒಂದರಲ್ಲಿ ವಾಸವಾಗಿದ್ದಳು. ಇಬ್ಬರೂ ಪರಸ್ಪರ ಸಂಶಯದಿಂದ ಆಗಾಗ ಜಗಳವಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರ ನಡುವೆ ಹಣಕಾಸಿನ ವ್ಯವಹಾರ ಸಹ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕಾಗಿ ಆತನನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ವೃದ್ಧೆಯನ್ನು ಸೆಕ್ಸ್‌ಗೆ ಪೀಡಿಸಿದ್ದ ಆರೋಪ- ಯುವಕ ಅರೆಸ್ಟ್

ಮೃತ ಜಾವಿದ್ ಮೊಬೈಲ್ ಸರ್ವಿಸ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಮಡಿವಾಳದಲ್ಲಿ ಒಂದೇ ಏರಿಯಾದಲ್ಲಿ ವಾಸವಾಗಿದ್ದ ವೇಳೆ ಇಬ್ಬರಿಗೂ ಪರಿಚಯವಾಗಿತ್ತು. ಬಳಿಕ ಇಬ್ಬರೂ ವಸತಿ ಗೃಹ ಇಲ್ಲವೇ ಅಪಾರ್ಟ್‍ಮೆಂಟ್‍ನಲ್ಲಿ ಉಳಿದುಕೊಳ್ಳುತ್ತಿದ್ದರು. ಕೊಲೆ ನಡೆಯುವ ಮೂರು ದಿನದ ಹಿಂದೆ ಇಬ್ಬರು ಭೇಟಿಯಾಗಿದ್ದರು. ಬಳಿಕ ಹುಳಿಮಾವಿನ ಅಕ್ಷಯ ನಗರದ ಅಪಾರ್ಟ್‍ಮೆಂಟ್‍ಗೆ ಬಂದಿದ್ದರು.

ಬಳಿಕ ಸೆ.5 ರಂದು ಇಬ್ಬರ ನಡುವೆ ಜಗಳ ನಡೆದಿತ್ತು. ಈ ವೇಳೆ ಆರೋಪಿ ಚಾಕುವಿನಿಂದ ಜಾವಿದ್‍ನ ಎದೆಗೆ ಇರಿದಿದ್ದಳು. ಬಳಿಕ ಅಲ್ಲಿನ ನಿವಾಸಿಗಳ ಜೊತೆ ಸೇರಿ ಆತನನ್ನು ಆಸ್ಪತ್ರೆಗೆ ಸೇರಿಸಿದ್ದಳು. ನಂತರ ಆಸ್ಪತ್ರೆಯಿಂದ ವಾಪಸ್ ಅಪಾರ್ಟ್‍ಮೆಂಟ್‍ಗೆ ತೆರಳಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಳು. ಈ ವೇಳೆ ಅಪಾರ್ಟ್‍ಮೆಂಟ್ ಸಿಬ್ಬಂದಿ ಡೋರ್ ಲಾಕ್ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಸಂಬಂಧ ಹುಳಿಮಾವು ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿ – ಬೈಕ್ ಸವಾರ ಸಾವು

Web Stories

Share This Article