ಭಾರತ, ಇಂಡಿಯಾ ಚರ್ಚೆಯನ್ನು ನಾವು ಹುಟ್ಟು ಹಾಕಿಲ್ಲ: ಪ್ರಹ್ಲಾದ್ ಜೋಶಿ

Public TV
1 Min Read
PRALHAD JOSHI

ಹುಬ್ಬಳ್ಳಿ: ಭಾರತ್ ಹೆಸರಿನ ಕುರಿತು ಕೇಂದ್ರ ಸರ್ಕಾರದ ವಕ್ತಾರರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಭಾರತ ಎನ್ನುವವರು ಭಾರತ ಎನ್ನಲಿ. ಇಂಡಿಯಾ ಎನ್ನುವವರು ಇಂಡಿಯಾ ಎನ್ನಲಿ. ಈ ಚರ್ಚೆಯನ್ನು ನಾವು ಹುಟ್ಟು ಹಾಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಘಟಬಂಧನ ಉಳಿಸಲು ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟಿದೆ. ರಾಜ್ಯದ ಹಿತಾಸಕ್ತಿ ಬಲಿಕೊಟ್ಟು ಈಗ ಕೋರ್ಟ್‍ಗೆ ಹೋಗಿದ್ದಾರೆ. ಈ ಮೂಲಕ ಮೋದಿಯವರನ್ನು ಸೋಲಿಸುವ ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಜನರು ಮೋದಿಯವರನ್ನು ಬೆಂಬಲಿಸಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: SC, ST ಸಮುದಾಯದ ದೌರ್ಜನ್ಯ ಕೇಸ್ ಸರಿಯಾಗಿ ನಿರ್ವಹಣೆ ಮಾಡದೇ ಹೋದ್ರೆ ಅಧಿಕಾರಿಗಳೇ ಹೊಣೆ: ಸಿಎಂ

ನಟ ಪ್ರಕಾಶ್ ರಾಜ್ ಸೇರಿದಂತೆ ಅತೃಪ್ತ ಆತ್ಮಗಳು ಸುದ್ದಿಯಲ್ಲಿ ಇರಲು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪರಮೇಶ್ವರ್ ಜಂಟಲ್‍ಮೆನ್ ಎಂದುಕೊಂಡಿದ್ದೆವು. ಆದರೆ ವೋಟ್‍ಬ್ಯಾಂಕ್ ಪಾಲಿಟಿಕ್ಸ್‍ಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಹಿಂದೂ, ಸನಾತನ ಧರ್ಮ ಎನ್ನುವುದು ನಿತ್ಯನೂತನವಾದದ್ದು. ಸನಾತನ ಸಂಸ್ಕೃತಿ ಬಹಳ ಪುರಾತನವಾದದ್ದು ಎನ್ನುವುದನ್ನು ಅವರು ತಿಳಿದುಕೊಳ್ಳಲಿ ಎಂದಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿರುವ ವಿಚಾರವಾಗಿ, ಸರ್ಕಾರ ಯಾವುದೂ ಶಾಶ್ವತ ಅಲ್ಲ. ಪೊಲೀಸರು ಬಿಜೆಪಿ (BJP) ಕಾರ್ಯಕರ್ತರ ಮೇಲೆ ದೌರ್ಜನ್ಯ ನಿಲ್ಲಿಸಬೇಕು. ರಾಜಕಾರಣಿಗಳ ಮಾತು ಕೇಳಿ ಕೇಸ್ ಹಾಕಬಾರದು. ಹಾಗೇನಾದರೂ ನಡೆದರೆ ಪೊಲೀಸರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಗರದಲ್ಲಿರುವ ಈದ್ಗಾ ಮೈದಾನ ಯಾವುದೇ ಒಂದು ಸಮುದಾಯಕ್ಕೆ ಸೇರಿದ್ದಲ್ಲ. ಮೈದಾನ ಪಾಲಿಕೆಯ ಆಸ್ತಿ. ಗಣೇಶ ಮೂರ್ತಿ ಇಡಲು ಪಾಲಿಕೆ ಅನುಮತಿ ಬೇಕು. ಕಳೆದ ವರ್ಷ ಕೋರ್ಟ್ ಆದೇಶದಂತೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ-ಸಾಗರ ರೈಲ್ವೆ ಹಳಿ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ – ರೈಲು 2 ಗಂಟೆ ವಿಳಂಬ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article