ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

Public TV
2 Min Read
Mumbai Crime

ಮುಂಬೈ: ತರಬೇತಿ ನಿರತ ಏರ್ ಇಂಡಿಯಾ ಗಗನಸಖಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ (Mumbai Murder Accused) ಅಂಧೇರಿ ಠಾಣೆಯ (Andheri Police Station) ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನ ಮರೋಲ್ ಪ್ರದೇಶದಲ್ಲಿರುವ ಫ್ಲಾಟ್‌ನಲ್ಲಿ 23 ವರ್ಷದ ಗಗನಸಖಿಯ (Air Hostess) ಕತ್ತು ಸೀಳಿ ಕೊಂದಿದ್ದ ಆರೋಪಿ ವಿಕ್ರಮ್ ಅತ್ವಾಲ್ (40) ನನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: G20 ಸಭೆ ದೆಹಲಿಯಲ್ಲಿ ಹೈ ಅಲರ್ಟ್ – ಆನ್‌ಲೈನ್ ಫುಡ್, ಅಮೆಜಾನ್, ಪ್ಲಿಪ್‌ಕಾರ್ಟ್ ಹೋಂ ಡೆಲಿವರಿ ಬಂದ್

Mumbai Crime 2

ಛತ್ತೀಸ್‌ಗಢ ಮೂಲದ ರೂಪಲ್ ಓಗ್ರೆ (Rupal Ogrey), ಏರ್ ಇಂಡಿಯಾದಲ್ಲಿ ತರಬೇತಿಗೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ತನ್ನ ಸಹೋದರಿ ಮತ್ತು ತನ್ನ ಗೆಳೆಯನೊಂದಿಗೆ ಅಂಧೇರಿಯ ಪ್ಲಶ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಗಗನಸಖಿ ಸಾವಿಗೆ ಸಂಬಂಧಿಸಿದಂತೆ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ವಿಕ್ರಮ್ ಅತ್ವಾಲ್‌ನನ್ನ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದರು. ಇದನ್ನೂ ಓದಿ: Chandrayaan-3: ಚಂದ್ರನ ಮೇಲೆ ಮತ್ತೊಮ್ಮೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ – ಇಸ್ರೋದಿಂದ ವೀಡಿಯೋ ರಿಲೀಸ್‌

Mumbai Crime 3

ಮುಂಬೈನಲ್ಲಿರುವ ತನ್ನ ಫ್ಲಾಟ್‌ನಲ್ಲಿ ಗಗನಸಖಿ ಭಾನುವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದಳು. ಕುಟುಂಬ ಸದಸ್ಯರ ಫೋನ್ ಕರೆಯನ್ನ ಆಕೆ ಸ್ವೀಕರಿಸದಿದ್ದಾಗ ಮುಂಬೈನಲ್ಲಿರುವ ಆಕೆಯ ಸ್ನೇಹಿತರಿಗೆ ಫೋನ್ ಮಾಡಿದ್ದಾರೆ. ಅವರು ಫ್ಲಾಟ್ ಗೆ ಬಂದು ನೋಡಿದಾಗ ಒಳಗಿನಿಂದ ಬೀಗ ಹಾಕಿರುವುದು ಕಂಡುಬಂದಿದೆ. ನಂತರ, ಅವರು ಪೊವೈ ಪೊಲೀಸರನ್ನ  (Powai Police) ಸಂಪರ್ಕಿಸಿದ್ದು, ಅವರ ಸಹಾಯದಿಂದ ನಕಲಿ ಕೀ ಬಳಸಿ ಫ್ಲಾಟ್ ಬಾಗಿಲು ತೆರೆದಾಗ ಮಹಿಳೆ ಕುತ್ತಿಗೆ ಸೀಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಅಲ್ಲಿ ದಾಖಲಿಸುವ ಮುನ್ನವೇ ಆಕೆ ಮೃತಪಟ್ಟಿದ್ದಳು ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಪೋವಾಯಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದರು. ಪ್ರಕರಣದ ಆರೋಪಿ ವಿಕ್ರಮ್ ಅತ್ವಾಲ್‌ನ ಪತ್ನಿಯನ್ನೂ ವಿಚಾರಣೆ ನಡೆಸಲಾಗುತ್ತಿತ್ತು. ತನಿಖೆಯ ಸಮಯದಲ್ಲಿ ಮಹಿಳೆ ತನ್ನ ಸಹೋದರಿ, ತದನಂತರ ಗೆಳೆಯನೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದದ್ದು ತಿಳಿದುಬಂದಿದೆ. ಆದರೆ ಇಬ್ಬರೂ ಎಂಟು ದಿನಗಳ ಹಿಂದೆ ತಮ್ಮ ಸ್ವಂತ ಸ್ಥಳಕ್ಕೆ ತೆರಳಿದ್ದರು. ಆದರೆ, ಇದೀಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದರು.

Web Stories

Share This Article