G20 Summit: ಮೊದಲ ದಿನದ ಅಧಿವೇಶನಗಳು ಯಶಸ್ವಿ – ಇಂದಿನ ಕಾರ್ಯಕ್ರಮಗಳೇನು?

Public TV
1 Min Read
g20 summit 2

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ (New Delhi) ಆಯೋಜಿಸಿರುವ ಜಿ20 ಶೃಂಗಸಭೆಯ (G20 Summit) ಮೊದಲ ದಿನದ ಅಧಿವೇಶನಗಳನ್ನು ಭಾರತ ಯಶಸ್ವಿಯಾಗಿ ಮುಗಿಸಿದೆ. ಇಂದು ಕೂಡ ದೆಹಲಿಯಲ್ಲಿ ಶೃಂಗಸಭೆ ನಡೆಯಲಿದ್ದು, ವಿಶ್ವ ನಾಯಕರು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳೇನು?
ಬೆಳಗ್ಗೆ 8:15 ರಿಂದ 9 ರ ವರೆಗೆ ಗಾಂಧಿ ಸಮಾಧಿ ಇರುವ ರಾಜ್‌ಘಾಟ್‌‌ಗೆ ವಿಶ್ವ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ಆಗಮಿಸಲಿದ್ದಾರೆ. ರಾಜ್‌ಘಾಟ್‌ನಲ್ಲಿರುವ ಪುಸ್ತಕಕ್ಕೆ ಸಹಿ ಮಾಡಲಿದ್ದಾರೆ. ನಂತರ ಬೆಳಗ್ಗೆ 9 ರಿಂದ 9:20 ರ ನಡುವೆ ಮಹಾತ್ಮಾ ಗಾಂಧಿ ಸಮಾಧಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: ಭಾರತ-ಮಧ್ಯಪ್ರಾಚ್ಯ-ಯುರೋಪ್ ನಡುವೆ ಮೆಗಾ ಕಾರಿಡಾರ್; ಜಿ20 ಶೃಂಗಸಭೆಯಲ್ಲಿ ಬಿಗ್ ಡೀಲ್

G20 Summit new delhi

ಬಳಿಕ ನಾಯಕರು ಮತ್ತು ನಿಯೋಗದ ಮುಖ್ಯಸ್ಥರು ಭಾರತ್ ಮಂಟಪ ಕಡೆಗೆ ಪ್ರಯಾಣ ಮಾಡಲಿದ್ದಾರೆ. ಬೆಳಗ್ಗೆ 9:40 ರಿಂದ 10:15 ರ ಹೊತ್ತಿಗೆ ಭಾರತ ಮಂಟಪಕ್ಕೆ ನಾಯಕರು ಮತ್ತು ನಿಯೋಗದ ಮುಖ್ಯಸ್ಥರ ಆಗಮಿಸಲಿದ್ದಾರೆ.

ಬೆಳಗ್ಗೆ 10:15 ರಿಂದ 10:30 ರ ನಡುವೆ ಭಾರತ ಮಂಟಪದ ಸೌತ್ ಪ್ಲಾಜಾದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ವಿಶ್ವ ನಾಯಕರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ ಶೃಂಗಸಭೆಯ ಮೂರನೇ ಅಧಿವೇಶನ ‘ಒಂದು ಭವಿಷ್ಯ’ದಲ್ಲಿ ಭಾಗಿಯಾಗಲಿದ್ದಾರೆ. ಕಡೆಯದಾಗಿ ನವದೆಹಲಿ ನಾಯಕರ ಘೋಷಣೆಯನ್ನು ಅಂಗೀಕಾರಿಸಲಾಗುವುದು. ಇದನ್ನೂ ಓದಿ: G20 Summit – ಜಾಗತಿಕ ಜೈವಿಕ ಇಂಧನ ಮೈತ್ರಿಕೂಟಕ್ಕೆ ಮೋದಿ ಚಾಲನೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article