ಮುಂಬೈ: 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಲಿಫ್ಟ್ (Lift) ಕುಸಿದ ಪರಿಣಾಮ 7 ಜನ ಮೃತಪಟ್ಟ ಘಟನೆ ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ (Thane) ನಡೆದಿದೆ.
ಮೃತರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಕರಿದಾಸ್ (38) ಮತ್ತು ಸುನೀಲ್ ಕುಮಾರ್ ದಾಸ್ (21) ಎಂದು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಇವರೆಲ್ಲ ಕಟ್ಟಡ ಕಾರ್ಮಿಕರಾಗಿದ್ದು ಲಿಫ್ಟ್‌ನಲ್ಲಿ ಇಳಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಿಫ್ಟ್‌ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿರಿಯೂರು ಬಳಿ ಬಸ್, ಲಾರಿ ಮಧ್ಯೆ ಭೀಕರ ಅಪಘಾತ – ಐವರ ದುರ್ಮರಣ
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ಲಿಫ್ಟ್ ಅಪಘಾತ ಬಹು ದೊಡ್ಡ ದುರಂತವಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಲಿಫ್ಟ್‌ನ ಕೇಬಲ್ ತುಂಡಾಗಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲಿ ಕುರಿಬಲಿ ಕೊಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರಿಬ್ಬರ ಮೇಲೆ ಹಲ್ಲೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]