ಸುಧಾ ಮೂರ್ತಿ ಜೊತೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ತಂದೆ, ತಾಯಿ ಮಂತ್ರಾಲಯಕ್ಕೆ ಭೇಟಿ

Public TV
1 Min Read
Yashvir Sunak Usha Sunak Sudha Murthy Mantralaya

ರಾಯಚೂರು: ಬ್ರಿಟನ್ ಪ್ರಧಾನಿ, ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ (Rishi Sunak) ತಂದೆ ತಾಯಿ ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದಿದ್ದಾರೆ.

MANTRALAYA YASHVIR SUNAK USHA SUNAK

ಯಶ್ವೀರ್ ಸುನಕ್ (Yashvir Sunak) ಹಾಗೂ ಉಷಾ ಸುನಕ್ (Usha Sunak) ದಂಪತಿ ಮೊದಲ ಬಾರಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಸುಧಾಮೂರ್ತಿ (Sudha Murthy) ಜೊತೆಯಲ್ಲಿ ಮಂತ್ರಾಲಯಕ್ಕೆ ಆಗಮಿಸಿದ ಯಶ್ವೀರ್ ಸುನಕ್, ಉಷಾ ಸುನಕ್ ದಂಪತಿ ರಾಯರ ಮೂಲವೃಂದಾವನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದಂಪತಿಗಳಿಗೆ ಆಶೀರ್ವಚನ ನೀಡಿದ್ದಾರೆ. ವಸ್ತ್ರ, ಫಲ, ಮಂತ್ರಾಕ್ಷತೆ ನೀಡಿ ಶ್ರೀಗಳು ಆಶಿರ್ವದಿಸಿದ್ದಾರೆ. ಸುನಕ್ ದಂಪತಿ ಶ್ರೀಗಳಿಂದ ಆಶಿರ್ವಾದ ಪಡೆದು ರಾಯರ ಪ್ರಸಾದ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article