ತಿರುಪತಿ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ – ಒಂದೇ ಕುಟುಂಬದ ಐವರು ಕನ್ನಡಿಗರು ಸಾವು

Public TV
1 Min Read
andhra accident chikkodi people

ಚಿಕ್ಕೋಡಿ/ಅಮರಾವತಿ: ತಿರುಪತಿ (Tirupati) ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 5 ಜನರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ (Andhra Pradesh) ನಡೆದಿದೆ.

ಅನ್ನಮಾಯ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಂದು (ಶುಕ್ರವಾರ) ಬೆಳಗಿನ ಜಾವ 3:30 ರ ಸುಮಾರಿಗೆ ಕಡಪ-ಚಿತ್ತೂರ ರಾಷ್ಟ್ರೀಯ ಹೆದ್ದಾರಿಯಯಲ್ಲಿ ಆದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: 8 ಎಕರೆ ಜಮೀನು ಖರೀದಿ, ಪೆಟ್ರೋಲ್ ಬಂಕ್ ನಿರ್ಮಾಣ – ಅಭಿನವ ಹಾಲಾಶ್ರೀ ಈಗ ನಾಪತ್ತೆ

ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32), ಹನುಮಂತ ಆಜೂರ (42) ಹಾಗೂ ಚಾಲಕ ಹನುಮಂತ ಜಾಧವ (32) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

11 ಜನರನ್ನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಒಂದೇ ಕುಟುಂಬದ ಒಟ್ಟು 16 ಜನ ತಿರುಪತಿ ದರ್ಶನಕ್ಕೆ ತೆರಳಿದ್ದರು. ಕ್ರೂಸರ್ ವಾಹನ ಮಾಡಿಕೊಂಡು ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ತಿರುಪತಿ ದರ್ಶನ ಮುಗಿಸಿಕೊಂಡು ರಾತ್ರಿ ವಾಪಸ್ ಆಗುತ್ತಿದ್ದಾಗ ಅಪಘಾತವಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಅಂಜುಮಾನ್ ಅರ್ಜಿ ವಜಾ – ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪನಿಗೆ ಇಲ್ಲ ವಿಘ್ನ

Web Stories

Share This Article