ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಹುಟ್ಟುಹಬ್ಬದ ದಿನ ದೇಶದ ಮೊದಲ ಲಿಂಗತ್ವ ಅಲ್ಪಸಂಖ್ಯಾತರ (Transgenders) ಹೊರರೋಗಿ ವಿಭಾಗವನ್ನು ದೆಹಲಿಯ (Delhi) ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಉದ್ಘಾಟಿಸಲಾಗಿದೆ. ಈ ಮೂಲಕ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಆರೋಗ್ಯ ಕ್ಷೇತ್ರದಲ್ಲಿ ನೂತನ ಹೆಜ್ಜೆ ಇರಿಸಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಅಜಯ್ ಶುಕ್ಲಾ ಅವರು, ವೈದ್ಯಕೀಯ ಆರೈಕೆಯನ್ನು ಪಡೆಯುವಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಎದುರಿಸುವ ಸವಾಲುಗಳ ಬಗ್ಗೆ ಒತ್ತಿ ಹೇಳಿದರು. ಆಸ್ಪತ್ರೆಯ ಸೇವೆಗಳನ್ನು ಪಡೆಯಲು ಅವರು ಹಲವಾರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ನೂತನ ವಿಭಾಗ ಆರಂಭದ ನಿರ್ಧಾರ ಕೈಗೊಳ್ಳಲಾಯಿತು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬರಗಾಲ ಘೋಷಣೆಗೆ ಒತ್ತಾಯ – ಶಾಸಕರ ಕಾರ್ಯಕ್ರಮಗಳ ಘೇರಾವ್‍ಗೆ ರೈತ ಸಂಘ ನಿರ್ಧಾರ
ಈ ವಿಭಾಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ರೋಗಿಗಳಿಗೆ ಮೀಸಲಾದ ವಿಶ್ರಾಂತಿ ಕೊಠಡಿಯನ್ನು ಒದಗಿಸಲಾಗುತ್ತದೆ. ಅವರು ಯಾವುದೇ ಅತಂಕವಿಲ್ಲದೇ ಚಿಕಿತ್ಸೆ ಪಡೆಯುವ ವಾತಾವರಣ ಕಲ್ಪಿಸಲಾಗುತ್ತದೆ. ಸೂಕ್ತ ಚಿಕಿತ್ಸೆಯನ್ನು ಸಹ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ವಿಚಾರವಾಗಿ ಕಾರ್ಯಕ್ರಮದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಸಂಭ್ರಮಿಸಿದ್ದಾರೆ. ಮೋದಿಯವರ ಹುಟ್ಟುಹಬ್ಬಕ್ಕೆ ಉಡುಗೊರೆ ದೊರೆತಂತಾಗಿದೆ. ಇದುವರೆಗೂ ನಾವು ಆಸ್ಪತ್ರೆಗೆ ಬರಲು ಹಿಂಜರಿಯುತ್ತಿದ್ದೆವು. ಆದರೆ ಈ ಕ್ರಮದಿಂದಾಗಿ ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಿದಂತಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ 14 ವಿದ್ಯಾರ್ಥಿನಿಯರು- ಕಾರಣ ನಿಗೂಢ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]