ನಟ, ಯುವರಾಜಕಾರಣಿ ನಿಖಿಲ್ ಕುಮಾರ್ (Nikhil Kumar) ತಮ್ಮ ಗನ್ ಮ್ಯಾನ್ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಬೀದರ್ (Bidar) ನಲ್ಲಿ ನಡೆದ ಮದುವೆ (Marriage) ಸಮಾರಂಭದಲ್ಲಿ ಪಾಲ್ಗೊಂಡು ನೂತನ ವಧುವರರಿಗೆ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲಿ ಬೀದರ್ ಸುತ್ತಲಿನ ಪ್ರವಾಸಿ ತಾಣಗಳಿಗೂ ಅವರು ಭೇಟಿ ನೀಡಿದ್ದಾರೆ.
ಗನ್ ಮ್ಯಾನ್ (Gun Man) ಮದುವೆಗೆ ಅಂಟೆಂಡ್ ಮಾಡಲು ಶೂಟಿಂಗ್ ಗೆ ಬ್ರೇಕ್ ಹಾಕಿದ್ದ ನಿಖಿಲ್ ಕುಮಾರ್, ಅದೇ ಸಮಯದಲ್ಲಿ ತಮ್ಮ ಪಕ್ಷದ ಬಂಡೆಪ್ಪ ಕಾಶಂಪುರ್ ಮನೆಗೂ ಭೇಟಿ ಕೊಟ್ಟಿದ್ದಾರೆ. ಬೀದರ್ ಕೋಟೆಯಲ್ಲಿ ನಿಖಿಲ್ ಕಂಡು ಸೆಲ್ಫಿಗಾಗಿ ಪ್ರವಾಸಿಗರು ಮುಗಿಬಿದ್ದಿದ್ದು, ಕೋಟೆಯ ಸೌಂದರ್ಯಕ್ಕೆ ಮನಸೋತು ಸ್ವತಃ ನಿಖಿಲ್ ಅವರೇ ಫೋಟೋ ಕ್ಲಿಕ್ಕಿಸಿಕೊಂಡ ಸಂಭ್ರಮಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ತಾವು ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿರುವ ನಿಖಿಲ್, ‘ರಾಜಕೀಯದಿಂದ ದೂರುವಿರುತ್ತೇನೆ. ಆದರೆ, ಸಾಮಾನ್ಯ ಕಾರ್ಯಕರ್ತನಾಗಿ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲಾರೆ’ ಎಂದಿದ್ದಾರೆ.
ಈ ಹಿಂದೆ ಕುಮಾರಸ್ವಾಮಿ ಅವರು ಇದೇ ಮಾತುಗಳನ್ನು ಆಡಿದ್ದರು. ಸಿನಿಮಾದಲ್ಲಿ ಸಾಕಷ್ಟು ಅವಕಾಶಗಳು ಇರುವುದರಿಂದ ಅಲ್ಲಿಯೇ ನೆಲೆಯೂರುವಂತೆ ಹೇಳಿದ್ದೇನೆ. ರಾಜಕಾರಣಕ್ಕೆ ನಿಖಿಲ್ ಬರುವುದು ಬೇಡ ಎಂದು ಕುಮಾರಸ್ವಾಮಿಗಳು ಹೇಳಿಕೆ ನೀಡಿದ್ದರು. ತಂದೆಯ ಮಾತನ್ನು ಪುತ್ರ ನಿಖಿಲ್ ಮತ್ತೆ ನೆನಪಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]