ಮಗಳ ಅಪಹರಣ ಕೇಸನ್ನು ಹಿಂಪಡೆಯುವಂತೆ ಹಲ್ಲೆಗೈದು ಮಹಿಳೆಗೆ ಒತ್ತಡ ಹೇರಿದ ಪೊಲೀಸ್

Public TV
1 Min Read
UP POLICE

ಲಕ್ನೋ: ಮಗಳನ್ನು ಅಪಹರಿಸಿ ಕಿರುಕುಳ ನೀಡಿದ ಪ್ರಕರಣವನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ. ಅಲ್ಲದೆ ಬಾಲಕಿ ತಾಯಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿ ವಿರುದ್ಧ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ ಘಟನೆ ಉತ್ರಪ್ರದೇಶದ (Uttarpradesh) ರಾಂಪುರದಲ್ಲಿ ನಡೆದಿದೆ.

ಘಟನೆಯನ್ನು ಗಮನಿಸಿ, ಜಿಲ್ಲಾಡಳಿತವು ಮಿಲಕ್ ಪೊಲೀಸ್ ಠಾಣೆಯ ಸರ್ಕಲ್ ಅಧಿಕಾರಿ, ಸ್ಟೇಷನ್ ಹೌಸ್ ಅಧಿಕಾರಿ ಮತ್ತು ಇಬ್ಬರು ಕಾನ್‍ಸ್ಟೆಬಲ್‍ಗಳನ್ನು ಕೆಲಸದಿಂದ ತೆಗೆದು ಹಾಕಿದೆ. ಆರೋಪಿ ಔಟ್‍ ಪೋಸ್ಟ್ ಉಸ್ತುವಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪೊರಕೆಯಿಂದ ಹೊಡೆದು ಜಾತಿನಿಂದನೆ ಆರೋಪ- ವ್ಯಕ್ತಿ ಆತ್ಮಹತ್ಯೆ

ಮಂಗಳವಾರ ಔಟ್‍ಪೋಸ್ಟ್ ಇನ್‍ಚಾರ್ಜ್ ಅಶೋಕ್ ಕುಮಾರ್ ಸೇರಿದಂತೆ ಕೆಲವು ಪೊಲೀಸರು ತನ್ನ ಮನೆಗೆ ಬಂದು ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ತನ್ನ ಮತ್ತು ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ನನಗೆ ಎರಡು-ಮೂರು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ನನ್ನ ಬಟ್ಟೆ ಹರಿದಿದ್ದಾರೆ ಎಂದು 12 ವರ್ಷದ ಬಾಲಕಿಯ ತಾಯಿ ಆರೋಪಿಸಿದ್ದಾರೆ.

ಆರೋಪಿಯು ತನ್ನ ಮಗಳನ್ನು ಬಲವಂತವಾಗಿ ಬೈಕ್‍ನಲ್ಲಿ ಕರೆದೊಯ್ದ ನಂತರ ಮಹಿಳೆಯು ಮಂಗಳವಾರ ಇಬ್ಬರು ಹದಿಹರೆಯದವರ ವಿರುದ್ಧ ಐಪಿಸಿ ಸೆಕ್ಷನ್ 354 (ತನ್ನ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ) ಮತ್ತು 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಸಾರ್ ಸಿಂಗ್ ಹೇಳಿದ್ದಾರೆ.

ಆರೋಪಿಗಳಿಬ್ಬರನ್ನೂ ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ನಾವು ಎಸ್‍ಎಚ್‍ಒ, ಸರ್ಕಲ್ ಅಧಿಕಾರಿ ಮತ್ತು ಇಬ್ಬರು ಕಾನ್‍ಸ್ಟೆಬಲ್‍ಗಳನ್ನು ತೆಗೆದುಹಾಕಿದ್ದೇವೆ ಮತ್ತು ಪೊಲೀಸ್ ಔಟ್‍ ಪೋಸ್ಟ್ ಉಸ್ತುವಾರಿ ಅಶೋಕ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article