ಕೆನಡಾದಲ್ಲಿ ಗ್ಯಾಂಗ್‌ವಾರ್‌ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ

Public TV
1 Min Read
khalistan terrorist

ಒಟ್ಟಾವಾ: ಕೆನಡಾದಲ್ಲಿ (Canada) ನಡೆದ ಗ್ಯಾಂಗ್‌ವಾರ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಸುಖ ಡುನೆಕೆ ಹತ್ಯೆಯಾಗಿದ್ದಾನೆ. ಡುನೆಕೆ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯ ಭಾಗವಾಗಿದ್ದ ಎನ್ನಲಾಗಿದೆ.

ಡುನೆಕೆ ಕೆನಡಾ ಮೂಲದ ದರೋಡೆಕೋರ ಅರ್ಶ್‌ದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ. ಇದನ್ನೂ ಓದಿ: ಭಾರತ ವಿರೋಧಿ ಪ್ರಚಾರಕ್ಕೆ ಖಲಿಸ್ತಾನ್ ಉಗ್ರರ ಜೊತೆ ಕೈ ಜೋಡಿಸಿದ ಪಾಕ್

Narendra Modi Justin Trudeau

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆಗೂ ಭಾರತೀಯ ಸರ್ಕಾರಿ ಏಜೆಂಟರಿಗೂ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ವಾರದ ಆರಂಭದಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಹೇಳಿದ್ದರು. ಈ ಹೇಳಿಕೆ ಭಾರತ-ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡುನೆಕೆ ಹತ್ಯೆಯಾಗಿದೆ.

ನಿಜ್ಜರ್ ಭಾರತೀಯ ಭಯೋತ್ಪಾದಕ ಮತ್ತು ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನಾಗಿದ್ದ. ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುದ್ವಾರದ ಹೊರಗೆ ಹತ್ಯೆಗೀಡಾಗಿದ್ದ. ಈತ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ. ಇದನ್ನೂ ಓದಿ: ಉಲ್ಟಾ ಹೊಡೆದ ಕೆನಡಾ- ಭಾರತವನ್ನು ಪ್ರಚೋದಿಸುತ್ತಿಲ್ಲವೆಂದ ಟ್ರುಡೋ

ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ-ವಿರೋಧಿ ಚಟುವಟಿಕೆಗಳು, ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರದ ಹಿನ್ನೆಲೆಯಲ್ಲಿ ಅಲ್ಲಿನ ಭಾರತೀಯರಿಗೆ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ.

ಭಾರತ ಮತ್ತು ಕೆನಡಾ ರಾಷ್ಟ್ರಗಳ ನಡುವೆ ಬಿಕ್ಕಟ್ಟು ತಲೆದೋರಿದೆ. ಈ ನಡುವೆ, ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದ ಆರೋಪ ಹೊತ್ತಿರುವ ದರೋಡೆಕೋರ ಗೋಲ್ಡಿ ಬ್ರಾರ್‌ನ ಸಹಚರರ ಮೇಲೆ ಪಂಜಾಬ್ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಗೋಲ್ಡಿ ಬ್ರಾರ್ ಖಲಿಸ್ತಾನಿ ಪ್ರತ್ಯೇಕತಾವಾದಿ ಚಳವಳಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಕೆನಡಾದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

Web Stories

Share This Article