ಬೆಂಗಳೂರು: `ಲೋಕ’ ಸಮರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಅಧಿಕೃತಗೊಂಡರೂ ಸೀಟು ಹಂಚಿಕೆ ಸಮಸ್ಯೆ ಕಗ್ಗಂಟಾಗಿಯೇ ಉಳಿದಿದೆ.
ದೆಹಲಿಯಲ್ಲಿ ಅಮಿತ್ ಶಾ (Amit Shah), ಜೆ.ಪಿ ನಡ್ಡಾ ಮತ್ತು ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ. ಸೀಟು ಹಂಚಿಕೆ ಸೇರಿ ಹಲವು ವಿಚಾರಗಳ ಬಗ್ಗೆ ಶುಕ್ರವಾರ ಗಹನಾರ್ಹ ಚರ್ಚೆ ನಡೆದಿದೆ. ಮೈತ್ರಿ ಏರ್ಪಡುವಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಮಹತ್ವದ ಪಾತ್ರ ವಹಿಸಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಟ್ವೀಟ್ ಮೂಲಕ ದೋಸ್ತಿಯನ್ನು ಖಚಿತಪಡಿಸಿದ್ದಾರೆ. ಆದ್ರೆ ಸೀಟು ಹಂಚಿಕೆ ಸಮಸ್ಯೆ ಮಾತ್ರ ಕಗ್ಗಂಟಾಗಿಯೇ ಉಳಿದಿದೆ. ಇದನ್ನೂ ಓದಿ: ಎನ್‌ಡಿಎ ಕೂಟ ಸೇರಿದ ಜೆಡಿಎಸ್ – ದೋಸ್ತಿ ಲೆಕ್ಕಾಚಾರ ಏನು? ಸೀಟ್ ಹಂಚಿಕೆ ಸೂತ್ರ ಏನು?
5-6 ಕ್ಷೇತ್ರಗಳ ಬಗ್ಗೆ ಅಮಿತ್ ಶಾ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ. ಜೆಡಿಎಸ್‌ನ ಮತಗಳು ಪ್ರಬಲವಾಗಿರುವ ಕ್ಷೇತ್ರಗಳು ಅದರಲ್ಲೂ ಮಂಡ್ಯ, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಕ್ಷೇತ್ರಗಳನ್ನು ಜೆಡಿಎಸ್ ತೆಕ್ಕೆಗೆ ತೆಗೆದುಕೊಳ್ಳುವ ಬಗ್ಗೆ ಚರ್ಚೆಗಳು ನಡೆದಿವೆ. ಆದ್ರೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ ಬಳಿಕವೇ ಹೈಕಮಾಂಡ್ ಮುಂದುವರಿಯಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.
ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚಿಸಿ, ದಸರಾ ಮಹೋತ್ಸವದ ಬಳಿಕ ಸೀಟು ಹಂಚಿಕೆ ಬಗ್ಗೆ ಅಧಿಕೃತ ಘೋಷಣೆಗೆ ಹೈಕಮಾಂಡ್ ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾವೇರಿ ಸಂಕಷ್ಟಕ್ಕೆ ಪರಿಹಾರವಾಗಿರುವ ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡಲಿ: ಡಿಕೆಶಿ
ಸೀಟ್ ಹಂಚಿಕೆ ಸೂತ್ರಗಳು:
ಫಾರ್ಮುಲಾ 1: 22/6 (ಬಿಜೆಪಿ-22, ಜೆಡಿಎಸ್-6)
ಫಾರ್ಮುಲಾ 2: 23/5 (ಬಿಜೆಪಿ-23, ಜೆಡಿಎಸ್-5)
ಫಾರ್ಮುಲಾ 3: 24/4 (ಬಿಜೆಪಿ-24, ಜೆಡಿಎಸ್-4)
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]