ಬೆಂಗಳೂರು-ಹೈದರಾಬಾದ್‌ ಸೇರಿ 9 ವಂದೇ ಭಾರತ್‌ ರೈಲುಗಳಿಗೆ ಮೋದಿ ಚಾಲನೆ

Public TV
1 Min Read
modi vande bharat

ನವದೆಹಲಿ: ಬೆಂಗಳೂರು-ಹೈದರಾಬಾದ್‌ ಸೇರಿದಂತೆ 9 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಭಾನುವಾರ) ಚಾಲನೆ ನೀಡಿದರು.

ಕರ್ನಾಟಕ ಸೇರಿದಂತೆ 11 ರಾಜ್ಯಗಳನ್ನು ಸಂಪರ್ಕಿಸುವ, 9 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ (Vande Bharat Express Trains) ವೀಡಿಯೋ ಕಾನ್ಫರೆನ್ಸ್‌ ಮೂಲಕ ಮೋದಿ ಚಾಲನೆ ಕೊಟ್ಟರು. ಇದನ್ನೂ ಓದಿ: ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್

ಈ ವೇಳೆ ಮಾತನಾಡಿದ ಪ್ರಧಾನಿ, ವಂದೇ ಭಾರತ್‌ ರೈಲುಗಳು ಭಾರತದಾದ್ಯಂತ ಪ್ರವಾಸೋದ್ಯಮ ಉತ್ತೇಜಿಸುತ್ತವೆ. ಪ್ರಯಾಣದ ಸಮಯವನ್ನು ಕಡಿಮೆಗೊಳಿಸುತ್ತವೆ. ಸರ್ಕಾರವು ಬಹು-ಮಾದರಿ ಸಂಪರ್ಕ ಮತ್ತು ಸುಲಭ ಪ್ರಯಾಣದ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ತಿಳಿಸಿದ್ದಾರೆ.

ಒಂಬತ್ತು ರೈಲುಗಳು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್‌ ರಾಜ್ಯಗಳಲ್ಲಿ ಸಂಪರ್ಕ ಸಾಧಿಸಲಿವೆ. ಇದನ್ನೂ ಓದಿ: ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್

ಉದಯಪುರ-ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ತಿರುನಲ್ವೇಲಿ-ಮದುರೈ- ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್, ಹೈದರಾಬಾದ್-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ವಿಜಯವಾಡ-ಚೆನ್ನೈ (ರೇಣಿಗುಂಟಾ ಮೂಲಕ) ವಂದೇ ಭಾರತ್ ಎಕ್ಸ್‌ಪ್ರೆಸ್, ಪಾಟ್ನಾ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್, ಕಾಸರಗೋಡು-ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್, ರೂರ್ಕೆಲಾ-ಭುವನೇಶ್ವರ್-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್, ರಾಂಚಿ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಜಾಮ್‌ನಗರ-ಅಹಮದಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಮೋದಿ ಚಾಲನೆ ನೀಡಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article