ಬೆಂಗಳೂರು ಬಂದ್ – ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ

Public TV
1 Min Read
KURUBURU SHANTHAKUMAR

ಬೆಂಗಳೂರು: ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ (Kuruburu Shanthakumar) ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ (Custody) ಪಡೆದಿದ್ದಾರೆ.

ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್ – ವಿಮಾನ ನಿಲ್ದಾಣದಲ್ಲಿ ಮುಂಜಾನೆಯಿಂದಲೂ ಸಹಜ ಸ್ಥಿತಿ

ಈ ಸಂದರ್ಭ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಂತಕುಮಾರ್, ಪೊಲೀಸರು ಗೂಂಡಾಗಿರಿ ಮೂಲಕ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರಿನ ಜನತೆ ಇದನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬರೂ ಬೀದಿಗಿಳಿಯಬೇಕು. ಸರ್ಕಾರಕ್ಕೆ ಸರಿಯಾದ ಪಾಠವನ್ನು ಕಲಿಸಬೇಕು. ಕರ್ನಾಟಕದ ರೈತರು ನಮಗೆ ಬೆಂಬಲ ನೀಡಿ ರಸ್ತೆಗಿಳಿಯಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಮೂವರು ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್‌

Web Stories

Share This Article