‘ಆರ್ ಎಕ್ಸ್ 100′ (Rx 100) ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ ನಿರ್ದೇಶಕ ಅಜಯ್ ಭೂಪತಿ (Ajay Bhupathi) ಪ್ಯಾನ್ ಇಂಡಿಯಾ ಸಿನಿಮಾ ಮಂಗಳವಾರಂ ಚಿತ್ರದ ಮೂಲಕ ಸದ್ದು ಮಾಡ್ತಿದ್ದಾರೆ. ಸ್ವಾತಿ ಗುಣಪತಿ- ಸುರೇಶ್ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್ ಹಾಗೂ ಅಜಯ್ ಭೂಪತಿ ಅವರ ಎ ಕ್ರಿಯೇಟಿವ್ ವರ್ಕ್ಸ್ ಜಂಟಿಯಾಗಿ ನಿರ್ಮಾಣ ಮಾಡಿದೆ.
ನಿರ್ದೇಶಕರಾಗಿ ಗಮನ ಸೆಳೆದಿದ್ದ ಅಜಯ್ ಭೂಪತಿ, ‘ಮಂಗಳವಾರಂ’ (Mangalavaram) ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಈ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮಂಗಳವಾರಂ ಸಿನಿಮಾ ನವೆಂಬರ್ 17ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಲಿದೆ. ಇದನ್ನೂ ಓದಿ:ಸಾವಿರ ಕೋಟಿ ಕ್ಲಬ್ ಸೇರಿದ ಶಾರುಖ್ ನಟನೆಯ ‘ಜವಾನ್’ ಸಿನಿಮಾ
ಸೌತ್ ಬ್ಯೂಟಿ ಪಾಯಲ್ ರಜಪೂತ್ (Payal Rajput) ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ವಿಭಿನ್ನ ಪಾತ್ರದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ. ಆರ್‌ಎಕ್ಸ್ 100 ಚಿತ್ರದ ಬಳಿಕ ಮತ್ತೆ ಡೈರೆಕ್ಟರ್ ಅಜಯ್ ಭೂಪತಿ ಜೊತೆ ಪಾಯಲ್ ಕೈಜೋಡಿಸಿದ್ದಾರೆ.
‘ಮಂಗಳವಾರಂ’ (Mangalavaram) ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಪಾಯಲ್ ರಜಪೂತ್, ಶ್ರೀತೇಜ್, ಚೈತನ್ಯ ಕೃಷ್ಣ, ಅಜಯ್ ಘೋಷ್, ಲಕ್ಷ್ಮಣ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ‘ಮಂಗಳವಾರಂ’ ಚಿತ್ರಕ್ಕೆ ಕನ್ನಡದ ಅಜನೀಶ್ ಲೋಕನಾಥ್ (Ajaneesh Lokanath) ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿರಲಿದೆ. ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್ ಯಡವಲ್ಲಿ ಕಾರ್ಯನಿರ್ವಹಿಸಿದ್ದಾರೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]