ನಾಳಿನ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

Public TV
1 Min Read
Basavaraj Bommai 1

ಹುಬ್ಬಳ್ಳಿ: ಕಾವೇರಿ ಅಷ್ಟೇ ಅಲ್ಲ, ಕೃಷ್ಣೆಯ ಹಿತರಕ್ಷಣೆಗೂ ಸರ್ಕಾರ ಮುಂದಾಗಬೇಕು. ಈ ವಿಚಾರದಲ್ಲಿ ನಾವೆಲ್ಲ ಒಂದಾಗಿದ್ದೇವೆ. ಒಂದು ವೇಳೆ ಸರ್ಕಾರ ಎಡವಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಶುಕ್ರವಾರದ ಬಂದ್‌ಗೆ (Karnataka Bandh) ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ 3,000 ಕ್ಯೂಸೆಕ್ ಆದೇಶ ಬಂದಿದೆ. 10,000 ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ ಬಂದಿದೆ. ಜನ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು (Tamil Nadu) ಟ್ರಿಬ್ಯುನಲ್ ಆದೇಶವನ್ನು ಉಲ್ಲಂಘನೆ ಮಾಡಿದೆ. ಇದನ್ನೂ ಓದಿ: ಟಿಕೆಟ್ ಸಿಗದೆ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಹೋಗೋರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ

ಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿಗಾಗಿ (Cauveri Water) ಎಲ್ಲಿಯವರೆಗೂ ಹೋರಾಟ ಇರುತ್ತೋ ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು. ಇದನ್ನೂ ಓದಿ: ಡ್ರಗ್ಸ್ ಕೇಸ್- ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖಯರಾ ಬಂಧನ

Web Stories

Share This Article