ರಾಯಚೂರಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು

Public TV
2 Min Read
DENGUE 1

ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ (Dengue) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಕರಣಗಳ ಸಂಖ್ಯೆ ಲೆಕ್ಕಕ್ಕೆ ಸಿಕ್ಕರೂ, ಖಾಸಗಿ ಆಸ್ಪತ್ರೆಗಳಲ್ಲೇ ಹೆಚ್ಚು ರೋಗಿಗಳು ದಾಖಲಾಗುತ್ತಿರುವುದರಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಸೊಳ್ಳೆಗಳ (Mosquito) ನಿಯಂತ್ರಣಕ್ಕೆ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಯಚೂರು (Raichur) ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಇದುವರೆಗೆ 18 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನೂ 300ಕ್ಕೂ ಹೆಚ್ಚು ಮಾದರಿಗಳ ವರದಿ ಬರುವುದು ಬಾಕಿಯಿದೆ. ಇದು ಸರ್ಕಾರಿ ಆಸ್ಪತ್ರೆಗಳ ವರದಿಯಾದರೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆ ಇನ್ನೂ ಹೆಚ್ಚಿದೆ. ಹೀಗಾಗಿ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇದನ್ನೂ ಓದಿ: ಮೈತ್ರಿಯಿಂದ ಭಿನ್ನಮತ ಸ್ಫೋಟ – ಮುಖಂಡರ ಮನವೊಲಿಸಲು ನಿಖಿಲ್ ಕಸರತ್ತು

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಸೌಲಭ್ಯಗಳಿಲ್ಲ. ಗ್ರಾಮೀಣ ಭಾಗದಲ್ಲಿ ಸಣ್ಣ ಜ್ವರ ಬಂದರೂ ಜನ ನಗರ ಪ್ರದೇಶಗಳಿಗೆ ಬರಬೇಕಾದ ಸ್ಥಿತಿಯಿದೆ. ಹೀಗಾಗಿ ಡೆಂಗ್ಯೂ ತಡೆಯಲು ಮುನ್ನೆಚ್ಚರಿಕೆಯಾಗಿ ಸೊಳ್ಳೆ ಪರದೆ ವಿತರಿಸಬೇಕು. ನಗರದ ಗ್ರಾಮೀಣ ಭಾಗದಲ್ಲಿ ಫಾಗಿಂಗ್ ಮೂಲಕ ಸೊಳ್ಳೆ ನಿಯಂತ್ರಿಸಬೇಕು. ಸೊಳ್ಳೆ ಉತ್ಪತ್ತಿ ಪ್ರದೇಶಗಳಲ್ಲಿ ಔಷಧಿ ಸಿಂಪಡಿಸಬೇಕು. ಆರೋಗ್ಯ ಶಿಬಿರಗಳನ್ನು ಮಾಡಿ ತಪಾಸಣೆಯ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ನಗರಸಭೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಜಟಾಪಟಿ ಪ್ರಕರಣ – ಎಫ್‌ಐಆರ್ ದಾಖಲು

ಆಗಸ್ಟ್ ತಿಂಗಳಲ್ಲಿ 495 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, 7 ಮಾದರಿಗಳು ಎಲಿಸಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿವೆ. ಸೆಪ್ಟೆಂಬರ್ ತಿಂಗಳಲ್ಲಿ 185 ಮಾದರಿಗಳಲ್ಲಿ 11 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಖಾಸಗಿ ಪ್ರಯೋಗಾಲಯಗಳಲ್ಲಿ ಆರ್‌ಡಿಕೆ ಕಿಟ್‌ಗಳಲ್ಲಿ ಪಾಸಿಟಿವ್ ಬಂದ ಮಾದರಿಗಳನ್ನು ಪುನಃ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗ ಬರುತ್ತಿರುವ ಡೆಂಗ್ಯೂ ಜ್ವರ ಮಂದಗತಿಯ ವಿಧದಲ್ಲಿರುವುದರಿಂದ ಸಾರ್ವಜನಿಕರು ಆತಂಕಪಡಬಾರದು. ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕ ಸಮರಕ್ಕೆ ತಯಾರಿ – ಸಿಎಂ ಪುತ್ರ ಯತೀಂದ್ರಗೆ ಸಿಗುತ್ತಾ ಟಿಕೆಟ್?

ಡೆಂಗ್ಯೂ ಜ್ವರ ಮಂದವಾಗಿರುವುದರಿಂದ ಆಸ್ಪತ್ರೆಗೆ ದಾಖಲಾಗಿರುವವರ ಸಂಖ್ಯೆ ಕಡಿಮೆಯಿದ್ದು, ಆಸ್ಪತ್ರೆಗೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಸೊಳ್ಳೆಗಳ ಉತ್ಪತ್ತಿ ತಡೆಯಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ಸಾರ್ವಜನಿಕರು ಸಹ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಇದನ್ನೂ ಓದಿ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್‌

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article