ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

Public TV
1 Min Read
BASAVARAJ BOMMAI

ಬೆಂಗಳೂರು: ಶಿವಮೊಗ್ಗ (Shivamogga) ಸೂಕ್ಷ್ಮ ಪ್ರದೇಶ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈ ಸರ್ಕಾರದ್ದು ಗಾಂಧಿ ವಿರೋಧಿ ನೀತಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ (Communal Violence) ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ ಪ್ರಕ್ಷುಬ್ಧ ನಗರ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆ ಸಹ ಹಲವು ಅಹಿತಕರ ಘಟನೆಗಳು ನಡೆದಿವೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ

ಮೂರು ಠಾಣೆಗಳ ವ್ಯಾಪ್ತಿಯಲ್ಲೇ ಈ ರೀತಿಯ ಗಲಭೆಗಳು ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಆ ಮೂರು ಠಾಣೆಗಳಿಗೆ ಸೂಕ್ತ ಅಧಿಕಾರಿಗಳನ್ನು ನಿಯೋಜಿಸುತ್ತಿಲ್ಲ. ಪದೇ ಪದೇ ವರ್ಗಾವಣೆ ಮಾಡಲಾಗುತ್ತಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸುಳ್ಳು ಹೇಳಿ, ಸುಳ್ಳು ಆಶ್ವಾಸನೆ ಕೊಟ್ಟು ಜನರ ದಾರಿ ತಪ್ಪಿಸುವುದೇ ಕಾಂಗ್ರೆಸ್‍ನ (Congress) ಕೆಲಸವಾಗಿದೆ. ಸರ್ಕಾರ ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಸರ್ಕಾರವೇ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಕೊಡುವುದನ್ನು ಬಿಡಬೇಕು. ಈ ಗಲಾಟೆ ಹಿಂದೆ ಓಲೈಕೆ ರಾಜಕಾರಣ ಇದೆ. ಪೊಲೀಸರು ಲಾಠಿ ಚಾರ್ಜ್ ಮಾಡುವ ಪರಿಸ್ಥಿತಿ ಬರಬಾರದಿತ್ತು. ಸರ್ಕಾರ ದಮನಕಾರಿ ನೀತಿ ಬಿಡಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ

Web Stories

Share This Article