ಹುಬ್ಬಳ್ಳಿ: ಕಾಮ ತೃಷೆಗಾಗಿ ಅಪ್ರಾಪ್ತ ಬಾಲಕರೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಅದನ್ನು ವೀಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಹುಬ್ಬಳ್ಳಿ (Hubballi) ಪ್ರತಿಷ್ಠಿತ ಹೋಟೆಲ್ ಕುಕ್‌ನನ್ನು (ಬಾಣಸಿಗ) ಸ್ಥಳೀಯರು ಹಿಡಿದು, ಥಳಿಸಿ ಪೊಲೀಸರಿಗೆ (Police) ಒಪ್ಪಿಸಿರುವ ಘಟನೆ ನಡೆದಿದೆ.
ನಗರದ ಸಿದ್ಧಲಿಂಗೇಶ್ವರ ಕಾಲೋನಿಯಲ್ಲಿ ವಾಸವಿದ್ದ ಒಡಿಶಾ ಮೂಲದ ಕುಕ್, ನಗರದ ಪ್ರತಿಷ್ಠಿತ ಹೋಟೆಲೊಂದರಲ್ಲಿ (Hotel) ಕೆಲಸ ಮಾಡುತ್ತಿದ್ದ. ಸಲಿಂಗಕಾಮಿಯಾಗಿದ್ದ ಈತ ಅಪ್ರಾಪ್ತ ಮಕ್ಕಳನ್ನೇ ಟಾರ್ಗೆಟ್ ಮಾಡಿ ಹಣ ಮತ್ತು ಚಾಕ್ಲೇಟ್ ಆಸೆ ತೋರಿಸಿ ಲೈಂಗಿಕ ಕ್ರಿಯೆ ನಡೆಸಿ ವೀಡಿಯೋ ಮಾಡ್ತಿದ್ದ. ಬಳಿಕ ಅದೇ ವೀಡಿಯೋ ಇಟ್ಟುಕೊಂಡು ಮಕ್ಕಳಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಅಲ್ಲ; ಲಿಂಗಾಯತ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ ಬಸವರಾಜ ರಾಯರೆಡ್ಡಿ
ಬಳಿಕ ಈತನ ಮೇಲೆ ಅನುಮಾನಗೊಂಡ ಸ್ಥಳೀಯರು ಕುಕ್ ಮನೆಗೆ ನುಗ್ಗಿ ಥಳಿಸಿ ಮೊಬೈಲ್ ಕಸಿದುಕೊಂಡಿದ್ದಾರೆ. ಮೊಬೈಲ್ ಪರಿಶೀಲನೆ ಮಾಡಿದಾಗ ಆತನ ನಿಜಮುಖ ಬಯಲಾಗಿದೆ. ಇದರಿಂದ ಕೋಪಗೊಂಡ ಸ್ಥಳೀಯರು ಆತನಿಗೆ ಮನಬಂದಂತೆ ಥಳಿಸಿ ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಹಿಂದೂ ಸಮಾಜವನ್ನ ಹೇಡಿ ಸಮಾಜ ಎಂದು ತೋರಿಸುವ ಪ್ರಯತ್ನ ಮಾಡ್ತಿದ್ದಾರೆ: ಚಕ್ರವರ್ತಿ ಸೂಲಿಬೆಲೆ
ನಗರ ಪೊಲೀಸ್ ಠಾಣೆಯಲ್ಲಿ ಬಾಣಸಿಗನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]