ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್‍ಗೆ ಯುವಕ ಬಲಿಯಾದ ಘಟನೆ ಕೊಪ್ಪಳ (Koppala) ಜಿಲ್ಲೆಯಲ್ಲಿ ನಡೆದಿದೆ. ಸುದೀಪ್ ಸಜ್ಜನ್ (30) ಮೃತ ಯುವಕ. ಈತನಿಗೆ ಡಿಜೆ ಸೌಂಡ್ ಗೆ (DJ Sound) ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ 21 ದಿನದ ಗಣೇಶ ವಿಸರ್ಜನೆ ನಡೆದಿದೆ. ಗಂಗಾವತಿಯ ಪ್ರಶಾಂತ ನಗರದ ಯುವಕರಿಂದ ಡಿಜೆ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಅಂತೆಯೇ ಬೆಳ್ಳಂಬೆಳಗ್ಗೆ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸೌಂಡ್ ಹಾಕಿ ಡ್ಯಾನ್ಸ್ ಮಾಡಲಾಗುತ್ತಿತ್ತು. ಇದನ್ನೂ ಓದಿ: ಹಮಾಸ್ ಉಗ್ರರ ನಡೆಗೆ ಮೋದಿ ಖಂಡನೆ- ಇಸ್ರೇಲ್ ಪರ ನಿಂತ ಭಾರತ
ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದು, ಕೆಲ ಹೊತ್ತಿನ ಬಳಿಕ ಕುಸಿದು ಬಿದ್ದಿದ್ದಾನೆ. ಘಟನೆಯಿಂದ ಸ್ವಯಂ ಪ್ರೇರಿತವಾಗಿ ಯುವಕರು ಅರ್ಧಕ್ಕೆ ಡಿಜೆ ಬಂದ್ ಮಾಡಿದರು. ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಗಂಗಾವತಿ ನಗರ ಠಾಣೆ ಪೆÇಲೀಸರು ಡಿಜೆ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]