ಟೆಲ್ ಅವಿವ್: ಇಸ್ರೇಲಿಗಳ (Israel) ಮೇಲೆ ಹಮಾಸ್ ಬಂಡುಕೋರರು (Hamas) ನಡೆಸುತ್ತಿರುವ ದಾಳಿಯನ್ನು ಯುಎಇ (ಸಂಯುಕ್ತ ಅರಬ್ ಒಕ್ಕೂಟ) ಖಂಡಿಸಿದೆ. ಹಮಾಸ್ ದಾಳಿಯನ್ನು ಖಂಡಿಸಿದ ಮೊದಲ ಮುಸ್ಲಿಂ ರಾಷ್ಟ್ರವಾಗಿದೆ.
ಜನಸಂಖ್ಯಾ ಕೇಂದ್ರಗಳ ಮೇಲೆ ಸಾವಿರಾರು ರಾಕೆಟ್‌ಗಳ ಹಾರಾಟ ಸೇರಿದಂತೆ ಗಾಜಾ ಪಟ್ಟಿಯ ಸಮೀಪವಿರುವ ಇಸ್ರೇಲಿ ಪಟ್ಟಣಗಳು ಮತ್ತು ಹಳ್ಳಿಗಳ ಮೇಲೆ ಹಮಾಸ್‌ನ ದಾಳಿಗಳು ಗಂಭೀರ ಸ್ವರೂಪದ್ದಾಗಿವೆ. ಇಸ್ರೇಲಿ ನಾಗರಿಕರನ್ನು ಅವರ ಮನೆಗಳಿಂದ ಒತ್ತೆಯಾಳುಗಳಾಗಿ ಅಪಹರಿಸಿರುವುದು ಕಳವಳಕಾರಿಯಾಗಿದೆ. ಎರಡೂ ಕಡೆಯ ನಾಗರಿಕರು ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯಲ್ಲಿ ಸಂಪೂರ್ಣ ರಕ್ಷಣೆ ಹೊಂದಿರಬೇಕು. ಎಂದಿಗೂ ಯಾರೂ ಸಂಘರ್ಷಕ್ಕೆ ಗುರಿಯಾಗಬಾರದು ಎಂದು ದಾಳಿಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಯುಎಇ ವಿದೇಶಾಂಗ ಸಚಿವಾಲಯ ಖಂಡನೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ಯುವತಿ ಅಪಹರಿಸಿ ಒತ್ತೆಯಾಳಾಗಿರಿಸಿಕೊಂಡ ಹಮಾಸ್ ಉಗ್ರರು
The UAE expressed its condolences to the families of the victims and urges all diplomatic efforts to prevent a wider regional confrontation.⁰Furthermore, @mofauae deeply mourns the loss of Israeli and Palestinian lives as a result of the outbreak of violence, and calls on both…
— حسن سجواني ???????? Hassan Sajwani (@HSajwanization) October 8, 2023
ದಾಳಿಯ ಬಲಿಪಶುಗಳ ಕುಟುಂಬಗಳಿಗೆ ಯುಎಇ ತನ್ನ ಸಂತಾಪ ವ್ಯಕ್ತಪಡಿಸುತ್ತದೆ. ಎರಡೂ ಕಡೆಯ ಈ ಮುಖಾಮುಖಿಯನ್ನು ತಡೆಗಟ್ಟಲು ರಾಜತಾಂತ್ರಿಕ ಪ್ರಯತ್ನಗಳ ಅಗತ್ಯವಿದೆ. ಹಿಂಸಾಚಾರದಿಂದ ಆಗಿರುವ ಜೀವಹಾನಿಗೆ ತೀವ್ರವಾಗಿ ದುಃಖಿಸುತ್ತದೆ. ನಾಗರಿಕ ಜೀವನ ಮತ್ತು ಸೌಲಭ್ಯಗಳ ಮೇಲೆ ಪರಿಣಾಮ ಬೀರುತ್ತಿರುವ ಹಿಂಸಾಚಾರ ಕೊನೆಗಾಣಿಸಬೇಕು ಎಂದು ಎರಡೂ ಕಡೆಯವರಿಗೆ ಯುಎಇ ಸಲಹೆ ನೀಡಿದೆ.
ಎಲ್ಲಾ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ಯುಎಇ ನಿಕಟ ಸಂಪರ್ಕದಲ್ಲಿದೆ. ಪರಿಸ್ಥಿತಿಯನ್ನು ತ್ವರಿತವಾಗಿ ತಗ್ಗಿಸಿ ಶಾಂತಿ ಪುನಃಸ್ಥಾಪಿಸಲು, ಪ್ಯಾಲೆಸ್ಟೀನಿಯನ್ನರು ಮತ್ತು ಇಸ್ರೇಲಿಗಳು ಶಾಂತಿ ಮಾತುಕತೆಗೆ ಮರಳಬೇಕು. ಪ್ರತಿಯೊಬ್ಬರೂ ಶಾಂತಿ ಮತ್ತು ಘನತೆಯಿಂದ ಬದುಕಲು ಅರ್ಹರು ಎಂದು ಒತ್ತಿ ಹೇಳಿದೆ. ಇದನ್ನೂ ಓದಿ: ಯುದ್ಧ ನಾವು ಆರಂಭಿಸಿಲ್ಲ ಆದ್ರೆ ಮುಗಿಸುತ್ತೇವೆ – ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಡುಗು
ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ ಹಠಾತ್ ದಾಳಿ ನಡೆಸಿದರು. ದೇಶದ ದಕ್ಷಿಣ ಮತ್ತು ಮಧ್ಯ ಭಾಗಗಳಿಗೆ ರಾಕೆಟ್‌ಗಳ ಸುರಿಮಳೆ ಸುರಿಸಿ 700 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಯಿತು.
Web Stories