ಚಿತ್ರದುರ್ಗ: ಟಿವಿ ರಿಮೋಟ್‌ಗಾಗಿ (Tv Remote) ಅಣ್ಣ-ತಮ್ಮಂದಿರ (Brothers) ನಡುವೆ ಗಲಾಟೆ ನಡೆದ ಹಿನ್ನೆಲೆ ಸಿಟ್ಟಿಗೆದ್ದ ತಂದೆ (Father) ಹಿರಿಮಗನ ಮೇಲೆ ಕತ್ತರಿ (Scissors) ಎಸೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಹಿರಿಮಗ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ.
ಜಿಲ್ಲೆಯ ಮೊಳಕಾಲ್ಮೂರು (Molakalmuru) ಪಟ್ಟಣದಲ್ಲಿ ಘಟನೆ ನಡೆದಿದ್ದು, ಹಿರಿಮಗ ಚಂದ್ರಶೇಖರ್ (16) ಸಾವನ್ನಪ್ಪಿದ್ದಾನೆ. ಮೃತ ಚಂದ್ರಶೇಖರ್ ಹಾಗೂ ತಮ್ಮ ಪವನ್ (14) ರಿಮೋಟ್‌ಗಾಗಿ ಗಲಾಟೆ ಮಾಡಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ತಂದೆ ಲಕ್ಷ್ಮಣ್‌ಬಾಬು ತನ್ನ ಹಿರಿಮಗನಾದ ಚಂದ್ರಶೇಖರ್ ಮೇಲೆ ಕತ್ತರಿ ಎಸೆದು ಹೆದರಿಸಲು ಮುಂದಾಗಿದ್ದಾರೆ. ಹಲವು ದಿನಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿರುವ ಲಕ್ಷ್ಮಣ್‌ಬಾಬು ಮಕ್ಕಳ ಜಗಳದಿಂದ ಸಿಟ್ಟಿಗೆದ್ದು ಹಿರಿಮಗನ ಕಡೆಗೆ ಕತ್ತರಿ ಎಸೆದಿದ್ದಾರೆ. ಇದನ್ನೂ ಓದಿ: ಕಾರು, ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ – 8 ಮಂದಿ ದುರ್ಮರಣ
ದುರಾದೃಷ್ಟವಶಾತ್ ಕತ್ತರಿ ಏಟು ಬಾಲಕನ ಕಿವಿಯ ಹಿಂಭಾಗಕ್ಕೆ ಜೋರಾಗಿ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವದಿಂದಾಗಿ ಚಂದ್ರಶೇಖರ್ (16) ಸಾವನ್ನಪ್ಪಿದ್ದಾನೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: 15 ವರ್ಷದಲ್ಲಿ ಒಮ್ಮೆಯೂ ತವರಿಗೆ ಕಳುಹಿಸದೆ ಕಿರುಕುಳ – ವಿಷ ಕುಡಿಸಿ ಪತ್ನಿಯ ಕೊಂದ ದುರುಳ ಪತಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]