ಮುಂಬೈ: ನ್ಯೂ ಅಷ್ಟಿಯಿಂದ (New Ashti) ಅಹಮದ್‌ನಗರಕ್ಕೆ (Ahmednagar) ತೆರಳುತ್ತಿದ್ದ ರೈಲಿನ (Train) 5 ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯ ವರದಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು (Railway Officials) ತಿಳಿಸಿದ್ದಾರೆ.
ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದ್ದು, ನಾರಾಯಣೋಹ್ (Narayandoh)ಮತ್ತು ಅಹಮದ್‌ನಗರ ವಿಭಾಗದ ನಡುವೆ ಘಟನೆ ನಡೆದಿದೆ. ಮೊದಲಿಗೆ ಗಾರ್ಡ್ ಸೈಡ್ ಬ್ರೇಕ್ ವ್ಯಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ನಾಲ್ಕು ಬೋಗಿಗಳಿಗೆ ಬೆಂಕಿ ವ್ಯಾಪಿಸಿದೆ. ಇದನ್ನೂ ಓದಿ: ಕರ್ತವ್ಯದ ವೇಳೆ ಆತ್ಮಹತ್ಯೆ ಮಾಡಿಕೊಂಡರೆ ಅಂತ್ಯಕ್ರಿಯೆಯಲ್ಲಿ ಮಿಲಿಟರಿ ಗೌರವ ಇಲ್ಲ: ಭಾರತೀಯ ಸೇನೆ
ಘಟನೆ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲದೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಬೆಂಕಿ ಹರಡುವ ಮೊದಲು ಎಲ್ಲಾ ರೈಲು ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದರು ಎಂದು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ಡಾ. ಶಿವರಾಜ್ ಮನಸ್ಪುರೆ ತಿಳಿಸಿದ್ದಾರೆ. ಇದನ್ನೂ ಓದಿ: ಮಿಷನ್ ಗಗನಯಾನ; ಅ.21 ಕ್ಕೆ ಮೊದಲ ಪರೀಕ್ಷಾರ್ಥ ಉಡಾವಣೆ
Web Stories